Featured

ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ : ಮೃತರ ಕುಟಂಬಕ್ಕೆ 50 ಲಕ್ಷ ಪರಿಹಾರ ಹಾಗೂ ಪ್ರಕರಣದ ತನಿಖೆಗೆ ಸಿಎಂ ಆದೇಶ -Vishwanews24

ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ : ಮೃತರ ಕುಟಂಬಕ್ಕೆ 50 ಲಕ್ಷ ಪರಿಹಾರ ಹಾಗೂ ಪ್ರಕರಣದ ತನಿಖೆಗೆ ಸಿಎಂ ಆದೇಶ -Vishwanews24

ಬೆಂಗಳೂರು: ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್ ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ಸಿಎಂ ಈ ಕ್ರಮ ತೆಗೆದುಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಇದರ ಜೊತೆಗೆ, ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ಕೂಡಲೇ 50 ಲಕ್ಷ ರೂ ಪರಿಹಾರವನ್ನೂ ಸಿಎಂ ಘೋಷಿಸಿದ್ಧಾರೆ. ಅವರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು. ಸರ್ಕಾರದ ಇತರ ಸೌಲಭ್ಯವನ್ನು ಶೀಘ್ರದಲ್ಲೇ ಒದಗಿಸಬೇಕು ಎಂದೂ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ವೈದ್ಯಾಧಿಕಾರಿ ನಾಗೇಂದ್ರ ನಿನ್ನೆ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದರು. ಇವರ ಸಾವು ಇದೀಗ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಕುರಿತು ನಿನ್ನೆ ಸಂಜೆ ಬೆಂಗಳೂರಿನಲ್ಲಿ ಮಾತನಾಡಿದ್ದ ಸಚಿವ ಡಾ| ಕೆ. ಸುಧಾಕರ್‌, “ವೈದ್ಯಾಧಿಕಾರಿಯ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು. ನಾಗೇಂದ್ರ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ಕೂಡ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಮೃತರ ಕುಟುಂಬದೊಂದಿಗೆ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ. ವೈದ್ಯಾಧಿಕಾರಿಗಳ ಸಂಘದೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿ ಮಾಡುವುದು ಅಮಾನವೀಯ. ಘಟನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯ ದೊರಕಿಸಿಕೊಡಲಾಗುವುದು” ಎಂದು ಭರವಸೆ ನೀಡಿದ್ದರು.

ಹಾಗೆಯೇ, ನಾಗೇಂದ್ರ ಅವರ ಕುಟುಂಬಕ್ಕೆ 30 ಲಕ್ಷ ರೂ ಪರಿಹಾರ ನೀಡುವುದಾಗಿ ಡಾ. ಸುಧಾಕರ್ ತಿಳಿಸಿದ್ದರು. ಆದರೆ, ವಿಶೇಷ ಸಂದರ್ಭವೆಂದು ಪರಿಗಣಿಸಿ ಪರಿಹಾರ ಹಣವನ್ನು 50 ಲಕ್ಷ ರೂಗೆ ಏರಿಸಲಾಗಿದೆ.

ಡಾ. ಎಸ್.ಆರ್. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರಿ ಆಸ್ಪತ್ರೆ ವೈದ್ಯರು ಇಂದು ಬೆಳಗ್ಗೆ ಪ್ರತಿಭಟನೆ ಮುಂದುವರಿಸಿದರು. ಜಿಲ್ಲಾ ಪಂಚಾಯತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಯಾರೊಬ್ಬರೂ ಕೆಲಸ ಮಾಡುವುದಿಲ್ಲ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ಹೊರತುಪಡಿಸಿ ಉಳಿದ ಯಾವುದೇ ಚಿಕಿತ್ಸೆ ನೀಡುವುದಿಲ್ಲ ಎಂದು ಆರೋಗ್ಯ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

6 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

7 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

7 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

7 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

7 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

7 hours ago