ಹಾಸನ: ಗುಜರಾತ್ ಮೂಲದ ಹಾಲು ಸಹಕಾರಿ ಸಂಘ ಅಮುಲ್, ಬೆಂಗಳೂರಿನ ಹಾಲು ಮಾರುಕಟ್ಟೆ ಪ್ರವೇಶಿಸಲು ನಿರ್ಧರಿಸಿರುವುದಕ್ಕೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮುಲ್ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದರು.
ಸೋಮವಾರ ಹಾಸನದ ಹಾಸನದ ಹೇಮಾವತಿ ಪ್ರತಿಮೆ ಬಳಿ ಇರುವ ನಂದಿನಿ ಹಾಲು ಮತ್ತು ಉತ್ಪನ್ನಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಹಾಲಿನ ಉತ್ಪನ್ನಗಳನ್ನು ಖರೀದಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಲಿನ ಉತ್ಪನ್ನಗಳಾದ ಮೈಸೂರು ಪಾಕ್, ಪೆಡಾ, ಬಿಸ್ಕೆಟ್, ಚಾಕಲೇಟ್ನ್ನು ಪಕ್ಷದ ಅಧ್ಯಕ್ಷನಾಗಿ ಖರೀದಿ ಮಾಡಿದ್ದೇನೆ. ನಮ್ಮ ರೈತರನ್ನು ಉಳಿಸಿಕೊಳ್ಳಬೇಕು, ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.
”ಹಾಸನದ ನಂದಿನಿ ಮಳಿಗೆಗೆ ಇಂದು ಭೇಟಿ ನೀಡಿ ಹಾಲಿನ ಉತ್ಪನ್ನಗಳನ್ನು ಖರೀದಿಸಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್‌ಅನ್ನು ಹೈಜಾಕ್ ಮಾಡಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಆದರೆ ಬಿಜೆಪಿ ಸರ್ಕಾರಕ್ಕೆ ಇದು ನೆನಪಿರಲಿ ಕನ್ನಡಿಗರು ಎಂದಿಗೂ ತಮ್ಮ ಸ್ವಾಭಿಮಾನ ಮಾರಿಕೊಳ್ಳುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…