Featured

ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಅಮುಲ್‌ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ ಡಿಕೆಶಿ – Vishwanews24

ನಮ್ಮ ರೈತರನ್ನು ಉಳಿಸಿಕೊಳ್ಳಬೇಕು, ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕು : ಡಿ.ಕೆ ಶಿ

ಹಾಸನ: ಗುಜರಾತ್ ಮೂಲದ ಹಾಲು ಸಹಕಾರಿ ಸಂಘ ಅಮುಲ್, ಬೆಂಗಳೂರಿನ ಹಾಲು ಮಾರುಕಟ್ಟೆ ಪ್ರವೇಶಿಸಲು ನಿರ್ಧರಿಸಿರುವುದಕ್ಕೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮುಲ್‌ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದರು.

ಸೋಮವಾರ ಹಾಸನದ ಹಾಸನದ ಹೇಮಾವತಿ ಪ್ರತಿಮೆ ಬಳಿ ಇರುವ ನಂದಿನಿ ಹಾಲು ಮತ್ತು ಉತ್ಪನ್ನಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಹಾಲಿನ ಉತ್ಪನ್ನಗಳನ್ನು ಖರೀದಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಲಿನ ಉತ್ಪನ್ನಗಳಾದ ಮೈಸೂರು ಪಾಕ್, ಪೆಡಾ, ಬಿಸ್ಕೆಟ್, ಚಾಕಲೇಟ್​​ನ್ನು ಪಕ್ಷದ ಅಧ್ಯಕ್ಷನಾಗಿ ಖರೀದಿ ಮಾಡಿದ್ದೇನೆ. ನಮ್ಮ ರೈತರನ್ನು ಉಳಿಸಿಕೊಳ್ಳಬೇಕು, ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.

”ಹಾಸನದ ನಂದಿನಿ ಮಳಿಗೆಗೆ ಇಂದು ಭೇಟಿ ನೀಡಿ ಹಾಲಿನ ಉತ್ಪನ್ನಗಳನ್ನು ಖರೀದಿಸಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್‌ಅನ್ನು ಹೈಜಾಕ್ ಮಾಡಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಆದರೆ ಬಿಜೆಪಿ ಸರ್ಕಾರಕ್ಕೆ ಇದು ನೆನಪಿರಲಿ ಕನ್ನಡಿಗರು ಎಂದಿಗೂ ತಮ್ಮ ಸ್ವಾಭಿಮಾನ ಮಾರಿಕೊಳ್ಳುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

51 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago