Featured

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ

ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ ಸಂಭವಿಸಿದೆ. ಈ ಆಘಾತದಿಂದ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಮೃತ ದುರ್ದೈವಿ. ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮಿಲ್ಕ್ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ವೆಂಕಟೇಶ್ ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸಿದ್ದಾರೆ.

ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ವೆಂಕಟೇಶ್, ಬೆಂಕಿ ನಂದಿಸಿದ ಕೆಲವೇ ಕ್ಷಣಗಳಲ್ಲಿ ಅಂಗಡಿ ಮುಂಭಾಗದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಯತ್ನಿಸಿದ್ದರು. ಆದರೆ ಹೃದಯಾಘಾತದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವೆಂಕಟೇಶ್ ಅವರು ಹಲವು ವರ್ಷಗಳಿಂದ ಇದೇ ನಂದಿನಿ ಮಿಲ್ಕ್ ಪಾರ್ಲರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಹಠಾತ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago