Featured

ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ – vishwanews24

ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಲಿನ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟನೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಸ್ಪಷ್ಟನೆ ವಿವರ ಹೀಗಿದೆ

ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧ ಲೀ. ಹಾಲಿನ ಪ್ಯಾಕೇಟ್‌ ನಲ್ಲಿ ಮುಂದೆ 550 ML ಹಾಲು ಹಾಗೂ ಒಂದು ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ML ಹಾಲು ಸಿಗಲಿದೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ.ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago