Featured

ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನದ ಸ್ಥಾನ ಹಿಂಪಡೆದ ಭಾರತ ..- Vishwanews24

ನವದೆಹಲಿ,:-ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಂತ ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ.

ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಭದ್ರತಾ ಸಮಿತಿ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಹಿಂದೆ ಪಾಕಿಸ್ತಾನವನ್ನು ಭಾರತ ಅತ್ಯಂತ ನಂಬಿಕಸ್ಥ ರಾಷ್ಟ್ರ ಎಂದು ಪರಿಗಣಿಸಿತ್ತು.

ಭಯೋತ್ಪಾದನ ವಿರುದ್ಧದ ಹೋರಾಟದಲ್ಲಿ ತಾನು ಭಾರತದೊಂದಿಗೆ ಕೈ ಜೋಡಿಸಲಿದ್ದೇನೆ ಎಂದು ಹೇಳಿದ್ದರಿಂದ ನೆರೆರಾಷ್ಟ್ರ ಪಾಕಿಸ್ತಾನ ಹೇಳಿಕೊಂಡಿತ್ತು.

ಆದರೆ ಇತ್ತೀಚಿನ ವರ್ಷಗಳಲ್ಲಿ ಪಾಕ್  ಒಂದು ಕಡೆ ಭಯೋತ್ಪಾದನೆ ವಿರುದ್ದ ತಮ್ಮ ಹೋರಾಟ ಎಂದು ಹೇಳುತ್ತಲೇ ಉಗ್ರರಿಗೆ ತನ್ನ ನೆಲದಲ್ಲಿಯೇ ಆಶ್ರಯ ನೀಡಿದೆ.

ನಿನ್ನೆ ಪುಲ್ವಾಮದಲ್ಲಿ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಆತ್ಮಾಹುತಿ ದಳದ ಉಗ್ರನೊಬ್ಬ 100 ಕೆಜಿ ಆರ್‍ಡಿಎಕ್ಸ್ ತುಂಬಿಕೊಂಡಿದ್ದ ವಾಹನವನ್ನು ಸೇನಾ ವಾಹನಕ್ಕೆ ಡಿಕ್ಕಿ ಹೊಡೆಸಿದ್ದರಿಂದ 37 ಮಂದಿ ಯೋಧರು ಹುತಾತ್ಮರಾಗಿದ್ದಾರೆ.

ಈ ಘಟನೆಗೆ ಪಾಕಿಸ್ತಾನವೇ ಕಾರಣ ಎಂಬುದು ಮನವರಿಕೆಯಾದ ನಂತರ ಭಾರತ, ನಂಬಿಕೆದ್ರೋಹಿ ಪಾಕಿಸ್ತಾನವನ್ನು ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ತೆಗೆದು ಹಾಕಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago