Featured

ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು; ಸಿಎಂ ಮುಂದೆ  ಶರಣಾಗತಿ ಸರಿಯಲ್ಲ : ಛಲವಾದಿ ನಾರಾಯಣಸ್ವಾಮಿ – vishwanews24

ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು ಸಿಎಂ ಮುಂದೆ  ಶರಣಾಗತಿ ಸರಿಯಲ್ಲ : ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ. ಇಷ್ಟುವರ್ಷ ಸಿಗದವರು ಈಗ ಹೇಗೆ ಸಿಕ್ಕರು? ನಕ್ಸಲರು ಬರಿಗೈನಲ್ಲಿ ಶರಣಾಗಿದ್ದಾರೆ. ಅವರ ಶಸ್ತ್ರಾಸ್ತ್ರ ಎಲ್ಲೋದವು? ಇವರ ಹಿಂದೆ ಇನ್ನೂ ನಕ್ಸಲಿರಿದ್ದಾರಾ? ಶಸ್ತ್ರಾಸ್ತ್ರ ಅವರಿಗೆ ಕೊಟ್ಟು ಬಂದಿದ್ದಾರೆಂಬ ಪ್ರಶ್ನೆ ಮೂಡಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ ಮಾಡುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪರಿಸ್ಥಿತಿ ಇದೆ. ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ. ದಲಿತ ಮಾಫಿಯಾ ಕಾಂಗ್ರೆಸ್‌ನಲ್ಲಿದೆ. ದಲಿತ ವಿರೋಧಿ ಸರ್ಕಾರವಿದು ಎಂದರು.

ಮುಂದುವರೆದು ಕಾಂಗ್ರೆಸ್ ಕೆಲ ಕುಟುಂಬಗಳ ಹಿಡಿತದಲ್ಲಿದೆ. ಖರ್ಗೆ, ಮುನಿಯಪ್ಪ, ಹೆಚ್.ಸಿ ಮಹದೇವಪ್ಪನ ಕುಟುಂಬಗಳು ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಿವೆ. ಇತರರಿಗೆ ಅವಕಾಶವೇ ಇಲ್ಲದಂತಾಗಿದೆ. ಇವರನ್ನು ಹೊರತುಪಡಿಸಿ ಯಾರು ಸಹ ಸಿಎಂ ಆಗಬಾರದೆಂಬ ಮಾಫಿಯಾವಿದೆ. ಇವರಲ್ಲಿ ಎರಡು ಗುಂಪುಗಳಿವೆ. ಒಂದು ದಲಿತ ವಿರೋಧಿ ಮಾಫಿಯಾವಿದೆ. ಇನ್ನೊಂದು ದಲಿತ ಮಾಫಿಯಾವಿದೆ. ಇವರೆಲ್ಲರೂ ಮತ್ತೋರ್ವ ದಲಿತ ಬೆಳೆಯಲು ಬಿಡಲ್ಲ. ಕಾಂಗ್ರೆಸ್‌ನಲ್ಲಿ ದಲಿತರಿಗೆ ಬೆಲೆ ಇಲ್ಲ. ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago