Featured

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ.. ?: ಗೃಹ ಸಚಿವ ಪರಮೇಶ್ವರ್‌ – vishwanews24

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ.. ? ಜಿ.ಪರಮೇಶ್ವರ್‌

ಬೆಂಗಳೂರು: ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಕ್ಸಲ್ ಚಟುವಟಿಕೆಗೆ ಬರಬಾರದು‌ ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು. ಮುಖ್ಯಮಂತ್ರಿಯವರ ಮುಂದೆ ಶರಣಾದಾಗ ರಾಜ್ಯದಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ. ನಕ್ಸಲರ‌ ಪರಿವರ್ತನೆಗೆ ಸರಕಾರ ಅವಕಾಶ ಕೊಟ್ಟಿದೆ. ಅದರಲ್ಲಿ ತಪ್ಪೇನಿದೆ‌. ಬಿಜೆಪಿ ಶಾಸಕ‌ ಸುನೀಲ್ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಜಾಸ್ತಿ ಇದೆ. ಎಎನ್ಎಫ್ ಕಾರ್ಕಳದಲ್ಲಿ ಇದೆಯಲ್ಲವೇ?ʼ ಎಂದು ಪ್ರಶ್ನಿಸಿದರು.

ನಕ್ಸಲರು ಶರಣಾದಾಗ ಶಸ್ತ್ರಾಸ್ತ್ರಗಳು ಇರಲಿಲ್ಲ. ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ. ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ. 99ರಷ್ಟು ಕೊನೆಯಾಗಿದೆ‌. ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರು ಇದ್ದಾರೆ. ನಮ್ಮ‌ ಮುಖ್ಯಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಶರಣಾದ ನಕ್ಸಲರ ಮೇಲೆ ಬೇರೆ ರಾಜ್ಯಗಳಲ್ಲಿ ಪ್ರಕರಣಗಳಿವೆ. ಆ ರಾಜ್ಯದ ಸರಕಾರಗಳು ಸಹ ತೀರ್ಮಾನ ಕೈಗೊಳ್ಳಬೇಕು ಎಂದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

3 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago