ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ : ಡಾ. ಜಿ ಪರಮೇಶ್ವರ್  – vishwanews24

Featured, ರಾಜ್ಯ ನ್ಯೂಸ್

ಶರಣಾಗತರಾಗಿರುವ ನಕ್ಸಲರ  ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ : ಡಾ. ಜಿ ಪರಮೇಶ್ವರ್ 

ಬೆಂಗಳೂರು : ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆʼ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ನಕ್ಸಲರ ಶಸ್ತ್ರಾಸ್ತ್ರ ದ ಕುರಿತ ಮಾಧ್ಯಮದವರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ʼಕಾಡಿನಲ್ಲಿ ಎಲ್ಲಿ ಇಟ್ಟಿದ್ದಾರೆ ಎಂಬುದನ್ನು ಪೊಲೀಸರು ಹುಡುಕುತ್ತಾರೆ. ನಾವು ಮಾಡುವ ಕೆಲಸ ಮಾಡುತ್ತೇವೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರ ಪೊಲೀಸರು ಕೆಲಸ‌ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ? ಅವರು ಕೂಡ ಸರಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ?ʼ ಎಂದರು.

ಉಡುಪಿ : ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಆರಂಭ – vishwanews24

ನಕ್ಸಲ್ ರವೀಂದ್ರ ಎಂಬಾತ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿ, ʼಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರಹಾಕಿದ್ದರು ಎಂಬುದು ಗೊತ್ತಿಲ್ಲ. ತನಿಖೆ ನಡೆದಿದೆ. ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಬಂದರೆ ನಿಗಾವಹಿಸಲಿದ್ದರೆʼ ಎಂದು ಹೇಳಿದರು.

ಎನ್‌ಕೌಂಟರ್‌ನಲ್ಲಿ‌ ಮೃತಪಟ್ಟ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಿದ್ದಾರೆ. ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಎಂದರು.

ಉಡುಪಿ : 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ – vishwanews24

Leave a Reply