ಬೆಂಗಳೂರು,: ನಗರದಲ್ಲಿ ನಾಲ್ಕು ಹೊಸ ಸಾರ್ವಜನಿಕ ಆಸ್ಪತ್ರೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ನಿನ್ನೆ ಸಂಜಯ್‍ಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಎಂಆರ್‍ಐ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಆಸ್ಪತ್ರೆಗೆ 100 ರಿಂದ 150 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. ನೂತನ ಆಸ್ಪತ್ರೆಗೆ ಸಚಿವ ಸಂಪುಟದ ಒಪ್ಪಿಗೆ ದೊರೆತಿದೆ ಎಂದು ಹೇಳಿದರು.ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಕೆಲವು ಸರ್ಕಾರಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತವೆ.
ಜಯದೇವ ಹೃದ್ರೋಗ ಆಸ್ಪತ್ರೆ, ಸಂಜಯಗಾಂಧಿ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಖಾಸಗಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಆರೋಗ್ಯ ಸಮಸ್ಯೆ ಉಳ್ಳವರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಗಳು ನೀಡುತ್ತಿರುವುದು ಸ್ವಾಗತಾರ್ಹ.
ಅದರಲ್ಲೂ ಜಯದೇವ, ಸಂಜಯಗಾಂಧಿ, ಇಂದಿರಾಗಾಂದಿ ಮಕ್ಕಳ ಆಸ್ಪತ್ರೆಗಳ ಮೂಲಕ ಬಡವರಿಗೆ ಉತ್ತಮ ಚಿಕಿತ್ಸೆ ನೀಡುವುದು ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಹೇಳಿದರು.
ಆರೋಗ್ಯ ಸಚಿವ ಶಿವಾನಂದ ಎಸ್.ಪಾಟೀಲ್, ಶಾಸಕರಾದ ಉದಯ್ ಗರುಡಾಚಾರ್, ಭೀಮಾನಾಯಕ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ, ಸಂಜಯ್‍ಗಾಂಧಿ ಆಸ್ಪತ್ರೆಯ ಡಾ.ಚಂದ್ರಶೇಖರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…