ನಗರದ ರಸ್ತೆಗಳಲ್ಲಿ ಗುಂಡಿಗಳು ಕಂಡುಬಂದಲ್ಲಿ ಅಧಿಕಾರಿಗಳಿಗೆ ದಂಡ ವಿಧಿಸಿ ಶಿಸ್ತು ಕ್ರಮ ಜರುಗಿಸಲಾಗುವುದು : ಮೇಯರ್ ಗಂಗಾಂಬಿಕೆ -Vishwanews24
ಬೆಂಗಳೂರು: ನಗರದ ರಸ್ತೆಗಳಲ್ಲಿ ಗುಂಡಿಗಳು ಕಂಡುಬಂದಲ್ಲಿ ಅಧಿಕಾರಿಗಳಿಗೆ ದಂಡ ವಿಧಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ಎಚ್ಚರಿಕೆ ನೀಡಿದರು.
ಸೆಪ್ಟೆಂಬರ್ ಆರರಿಂದ ಎಲ್ಲ 198 ವಾರ್ಡ್‍ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ತಪಾಸಣೆ ಮಾಡುವ ವೇಳೆ ಗುಂಡಿಗಳು, ಅವೈಜ್ಞಾನಿಕವಾಗಿ ಮುಚ್ಚಿರುವ ಗುಂಡಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಮುಲಾಜಿಲ್ಲದೆ ದಂಡ ವಿಧಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ಎಚ್ಚರಿಕೆ ನೀಡಿದರು.
ನಗರದ ರಸ್ತೆಗಳಲ್ಲಿ ಸಮರ್ಪಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಮೇಯರ್ ರಸ್ತೆ ವಿಭಾಗದ ಅಧಿಕಾರಿಗಳು ಮತ್ತು ಎಂಟು ವಲಯಗಳ ಮುಖ್ಯ ಎಂಜಿನಿಯರ್‍ಗಳ ಜತೆ ಸಭೆ ನಡೆಸಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚುವಂತೆ ಸೂಚಿಸಿದರು.
ನಗರದಲ್ಲಿ ಒಂದೇ ಒಂದು ಗುಂಡಿ ಕೂಡ ಕಾಣಿಸಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಆದರೂ ರಸ್ತೆ ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚಿಲ್ಲ. ಈ ಬಗ್ಗೆ ಸಾರ್ವಜನಿಕರ ದೂರುಗಳು ಬಂದ ಹಿನ್ನೆಲೆಯಲ್ಲಿ ಮೇಯರ್ ಇಂದು ಸಭೆ ಹಮ್ಮಿಕೊಂಡು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ರಸ್ತೆ ಮೂಲಭೂತ ಸೌಕರ್ಯ ವಿಭಾಗಕ್ಕೆ ಬರುವ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕೈಗೆತ್ತಿಕೊಂಡಿರುವ ಪರಿಣಾಮ ಆ ರಸ್ತೆಗಳ ದುರಸ್ತಿ ಕಾರ್ಯ ಗುತ್ತಿಗೆದಾರರಿಂದಲೇ ಮಾಡಿಸಬೇಕೆಂದು ಆದೇಶಿಸಿದರು.
