Featured

ನಗರಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ ಸ್ಥಾನ: ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಸುಂದರ ಪುತ್ತೂರು, ಪಾರದರ್ಶಕ ಆಡಳಿತದ ದೃಷ್ಟಿಕೋನವನ್ನು ಇರಿಸಿಕೊಂಡಿರುವ ಪುತ್ತೂರಿನ ಜನತೆ ಈ ಬಾರಿ ನಗರಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅತ್ಯಂತ ಹೆಚ್ಚು ಸ್ಥಾನಗಳಿಂದ ಅಧಿಕಾರಕ್ಕೆ ತರುತ್ತಾರೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರನ್ನು ಸಂಪರ್ಕಿಸುವ ಸಂದರ್ಭದಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗಿದೆ. ಪಕ್ಷದಿಂದ ಶಕ್ತಿಯುತ ಅಭ್ಯರ್ಥಿಗಳಿಗೆ ಈ ಬಾರಿ ಅವಕಾಶ ನೀಡಲಾಗಿದ್ದು, ಇವರನ್ನು ಗೆಲ್ಲಿಸಿಕೊಡಬೇಕು ಎಂದು ವಿನಂತಿಸಿದರು.

ಅರ್ಜಿಗಳನ್ನು ಸಕಾಲದಲ್ಲಿ ಸ್ವೀಕರಿಸುವ ಶಕ್ತಿಯೇ ರಾಜ್ಯ ಸರಕಾರಕ್ಕೆ ಇಲ್ಲ. ಸ್ಥಳೀಯಾಡಳಿತಗಳಲ್ಲಿ ಇ-ಆಡಳಿತವನ್ನು ಅನುಷ್ಠಾನ ಮಾಡಲು ಎಷ್ಟು ಒತ್ತಾಯಿಸಿದರೂ ಸ್ಪಂದಿಸಿಲ್ಲ. ಪುತ್ತೂರಿನಲ್ಲಿ ಇ- ಆಡಳಿತ, ಸಕಾಲವನ್ನು ಸಮರ್ಪಕಗೊಳಿಸಲು ಬಿಜೆಪಿ ಸದಸ್ಯರು ಬದ್ಧರಾಗಿದ್ದಾರೆ. ಡಾ| ಶಿವರಾಮ ಕಾರಂತರ ಬಾಲವನದ ಅಭಿವೃದ್ಧಿ, ಪ್ರವಾಸಿ ಕೇಂದ್ರ ಬೀರಮಲೆ ಬೆಟ್ಟದ ಅಭಿವೃದ್ಧಿಗೆ ಬಿಜೆಪಿ ಆಡಳಿತ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಒಂದು ನಿವೇಶನ ಕೊಟ್ಟಿಲ್ಲ :
ಪುತ್ತೂರು ನಗರಸಭೆಯಲ್ಲಿ ಹಿಂದಿನ ಶಾಸಕರು ಹಾಗೂ ಕಾಂಗ್ರೆಸ್‌ನ ಮಧ್ಯೆ ಬಣ ರಾಜಕೀಯದಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಬಡವರಿಗೆ ಒಂದು ನಿವೇಶನ ಒದಗಿಸಿಕೊಡಲೂ ಇವರಿಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದ ಶ್ರೀನಿವಾಸ ಪೂಜಾರಿ, ನಗರದಲ್ಲಿ ಕಸ ವಿಲೇವಾರಿ, ನಗರಸಭಾ ಕಚೇರಿಯಲ್ಲಿ ಬ್ರೋಕರ್‌ಗಳ ಹಾವಳಿ ನಿಲ್ಲಿಸುವ ನಿಟ್ಟಿನಲ್ಲಿ ಮತ್ತು ಮಾದರಿ ಸ್ಥಳೀಯಾಡಳಿತವಾಗಿ ಮಾಡುವ ನಿಟ್ಟಿನಲ್ಲಿ ಬಿಜೆಪಿಯ 31 ಸದಸ್ಯರನ್ನು ಗೆಲ್ಲಿಸಿಕೊಡಬೇಕು ಎಂದು ವಿನಂತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಅಪ್ಪಯ್ಯ ಮಣಿಯಾಣಿ, ಜೀವಂಧರ್‌ ಜೈನ್‌, ರಾಜೇಶ್‌ ಬನ್ನೂರು, ದಿನೇಶ್‌ ಮೆದು ಉಪಸ್ಥಿತರಿದ್ದರು.

ಭಾವನಾತ್ಮಕ ಸಂಗತಿಯೇ?
ಬಿಜೆಪಿಯವರು ಭಾವನಾತ್ಮಕವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಕೋಟ, ಮೂಡಬಿದಿರೆಯಲ್ಲಿ ಹಟ್ಟಿಯಿಂದ ಕತ್ತಿ ಛಳಪಿಸಿ ದನಗಳನ್ನು ದರೋಡೆ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಇದೇ ರೀತಿಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಬಿಜೆಪಿಯವರು ಮಾತನಾಡದಿದ್ದರೆ ಜನರ ಪರಿಸ್ಥಿತಿ ಏನಾಗಬಹುದು? ಇದು ಭಾವನಾತ್ಮಕ ವಿಚಾರವೇ? ಎಂದು ಪ್ರಶ್ನಿಸಿದರು. ಗೋ ಕಳ್ಳರು ಕತ್ತಿ ಹಿಡಿದಾಗ ನೀವು ಭಾವನಾತ್ಮಕವಾಗಿ ಅವರಲ್ಲಿ ಮಾತನಾಡಿ ಎಂದು ಸವಾಲು ಹಾಕಿದರು.

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

12 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

12 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

13 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

14 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

14 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

14 hours ago