Featured

ನಗರಾಭಿವೃದ್ಧಿ ಇಲಾಖೆ ಎಡವಟ್ಟು : 6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ಗೆ ವರ್ಗಾವಣೆ ಆದೇಶ – vishwanews24

ನಗರಾಭಿವೃದ್ಧಿ ಇಲಾಖೆ ಎಡವಟ್ಟು : 6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ಗೆ ವರ್ಗಾವಣೆ ಆದೇಶ

ಕಲಬುರಗಿ: ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃತಪಟ್ಟು 6 ತಿಂಗಳಾದ ನಂತರ ಮೃತ ಇಂಜಿನಿಯರ್‌ ಅನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿ ಎಡವಟ್ಟು ಮಾಡಿಕೊಂಡಿದೆ.

ಯಾವುದೇ ಒಂದು ಸಂಘ, ಸಂಸ್ಥೆ ಅಥವಾ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರ ಬಗ್ಗೆ ಆಯಾ ಸಂಸ್ಥೆಯ ಮುಖ್ಯಸ್ಥರು ತಿಗಾ ವಹಿಸಿರುತ್ತಾರೆ. ಇನ್ನು ಕಂಪನಿ ಮುಖ್ಯಸ್ಥನಲ್ಲದಿದ್ದರೂ ಅವರ ಕೈಕೆಳಗಿರುವ ಆಡಳಿತ ಸಿಬ್ಬಂದಿ ಎಲ್ಲ ನೌಕರರ ಮಾಹಿತಿಯನ್ನು ಸಂಗ್ರಹಿಸುತ್ತಿರುತ್ತಾರೆ. ಆದರೆ, ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃತಪಟ್ಟು 6 ತಿಂಗಳಾದರೂ ಈ ಬಗ್ಗೆ ಸರ್ಕಾರಕ್ಕೆ ಮಾಹಿತಿಯೇ ಸಿಕ್ಕಿಲ್ಲ. ಜೊತೆಗೆ, ಇಂಜಿನಿಯರ್ ಮೃತಪಟ್ಟು 6 ತಿಂಗಳು ಗೈರು ಹಾಜರಾದರೂ ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ. ಇದರ ಬದಲಾಗಿ ವಾರ್ಷಿಕ ವರ್ಗಾವಣೆ ಮಾಡುವಂತೆ ಮೃತ ಇಂಜಿನಿಯರ್ ಹೆಸರನ್ನು ಉಲ್ಲೇಖಿಸಿ ವರ್ಗಾವಣೆ ಆದೇಶ ಸಿದ್ಧಪಡಿಸಿ ಕಚೇರಿ ಮತ್ತು ಮನೆಯ ವಿಳಾಸಕ್ಕೆ ರವಾನೆ ಮಾಡಿದೆ.

ಈ ಘಟನೆ ನಡೆದಿರುವುದು ಕಲಬುರಗಿ ಜಿಲ್ಲೆಯಲ್ಲಿ. ಮೃತ ಇಂಜಿನಿಯರ್ ಅಶೋಕ್ ಪುಟಪಾಕ್ ಎನ್ನುವವರು ಕಳೆದ 6 ತಿಂಗಳ ಹಿಂದೆ ಜನವರಿಯಲ್ಲಿಯೇ ಮೃತಪಟ್ಟಿದ್ದಾರೆ. ಆದರೆ, ಇದಾದ ನಂತರ ಜು.9ರಂದು ಈ ಇಂಜಿನಿಯರ್‌ನನ್ನು ನಗರಾಭಿವೃದ್ಧಿ ಇಲಾಖೆಯಿಂದ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ ಪುಟಪಾಕ್‌ ಅವರನ್ನು ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈಗ ಮೃತ ಅಧಿಕಾರಿ ಎಲ್ಲಿಂದ ಬಂದು ವರ್ಗಾವಣೆ ಪಡೆದು ಕೆಲಸ ಮಾಡಲು ಸಾಧ್ಯವಾಗುತ್ತದೆಯೇ ಎಂದು ಜನರು ನಗಾಡಿಕೊಳ್ಳುತ್ತಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಈ ಎಡವಟ್ಟು ನಡೆದಿದೆ. ಜನವರಿ 12ರಂದು ಮೃತಪಟ್ಟಿದ್ದ ಕಿರಿಯ ಇಂಜಿನಿಯರ್ ಅಶೋಕ ಅವರು, ಇಲಾಖೆಯ ನೌಕರ ಮೃತಪಟ್ಟಿದ್ದರು ಎಂಬ ಮಾಹಿತಿ ಇಲ್ಲದೆ ನಗರಾಭಿವೃದ್ಧಿ ಇಲಾಖೆ ಮೃತ ವ್ಯಕ್ತಿಯನ್ನ ವರ್ಗಾವಣೆ ಮಾಡಿ ಮುಜುಗುರಕ್ಕಿಡಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago