ಚೆನ್ನೈ: ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಕಾವೇರಿ ಜಲ ವಿವಾದದ ಕುರಿತು ಭಾಷಣ ಮಾಡುವ ವೇಳೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದ ವೇಳೆ ಉದಯನಿಧಿ ನೀಡಿದ ಹೇಳಿಕೆಯನ್ನು ಹಲವರು ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ಮಾಡಿದ ದ್ವಂದ್ವಾರ್ಥದ ಮಾತು ಎಂದು ಆರೋಪಿಸಿದ್ದರು. ಈ ಕುರಿತು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕೆ ಒತ್ತಾಯಿಸಿದ್ದವು.
ಇದನ್ನೂ ಓದಿ:
ಪ್ರಕರಣ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಪೊಲೀಸರು ಉದಯನಿಧಿ ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಂಧನದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಉದಯನಿಧಿ, ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಮುಖ್ಯಮಂತ್ರಿಯನ್ನು ಬಿಟ್ಟರೆ ಬೇರೆ ಯಾರ ಹೆಸರನ್ನೂ ಹೇಳಿಲ್ಲ. ಇದು ರಾಜಕೀಯ ಪ್ರತೀಕಾರದ ಕ್ರಮ. ಈ ವಿಚಾರದ ಅಂತಿಮ ತೀರ್ಪನ್ನು ನ್ಯಾಯಾಲಯವೇ ನೀಡಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…