ಬೆಂಗಳೂರು: ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ , ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ಗೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ.
ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಹೇಳಿದ್ದಾರೆ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಇತ್ತೀಚಿಗೆ ಶಾಸಕ ರವಿ ಗಣಿಗ ಅವರು ರಶ್ಮಿಕಾ ವಿರುದ್ಧ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಕೊಡವ ನ್ಯಾಷನಲ್ ಕೌನ್ಸಿಲ್ ನಟಿಯ ಪರ ನಿಂತಿದೆ. ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ದೂರಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…