Featured

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಈವರೆಗೂ ಯಾವುದೇ ಪತ್ರ ಬಂದಿಲ್ಲ : ಪರಮೇಶ್ವರ್‌ – vishwanews24

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಈವರೆಗೂ ಯಾವುದೇ ಪತ್ರ ಬಂದಿಲ್ಲ : ಪರಮೇಶ್ವರ್‌

ಬೆಂಗಳೂರು: ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ , ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ಗೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ.

ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಹೇಳಿದ್ದಾರೆ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಇತ್ತೀಚಿಗೆ ಶಾಸಕ ರವಿ ಗಣಿಗ ಅವರು ರಶ್ಮಿಕಾ ವಿರುದ್ಧ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಕೊಡವ ನ್ಯಾಷನಲ್ ಕೌನ್ಸಿಲ್ ನಟಿಯ ಪರ ನಿಂತಿದೆ. ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ದೂರಿದ್ದಾರೆ.

 

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

4 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

4 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

5 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

5 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

5 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

6 hours ago