ಮುಂಬೈ: ಕನ್ನಡದ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ನಟ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ(42) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಟಿ ಶೆಫಾಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು. ಸದ್ಯ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಶೆಫಾಲಿ ಜನಿಸಿದ್ದು 1982ರ ಡಿಸೆಂಬರ್ 15ರಂದು. ಮುಂಬೈನಲ್ಲಿ ಹುಟ್ಟಿ, ಬೆಳೆದ ಅವರು ಪ್ರಸ್ತುತ ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದರು.
2004ರಲ್ಲಿ ಅವರು ಹರ್ಮೀತ್ ಸಿಂಗ್‌ನ ಮದುವೆಯಾದರು. ಈ ಸಂಬಂಧ 2009ರವರೆಗೆ ಇತ್ತು. ಆ ಬಳಿಕ ಇವರು ವಿಚ್ಛೇದನ ಪಡೆದರು. ಆ ಬಳಿಕ 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ಮದುವೆಯಾಗಿ ಸಂಸಾರ ನಡೆಸುತ್ತಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…