ತಮ್ಮ ಹುಟ್ಟುಹಬ್ಬದ ದಿನವೇ ತಮಿಳು ನಟ ವಿಶಾಲ್ ಅಭಿಮಾನಿಗಳಿಗೆ ಸರ್‌ಪ್ರೈಸ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಸಾಯಿ ಧನ್ಸಿಕಾ ಜೊತೆ ಚೆನ್ನೈನಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ಫೋಟೋಸ್‌ಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಟ ವಿಶಾಲ್ ಹೆಸರು ಹಿಂದೆ ಹಲವು ನಟಿಯರ ಜೊತೆ ಥಳುಕು ಹಾಕಿಕೊಂಡಿದ್ದರೂ ಮದುವೆವರೆಗೆ ಬಂದಿರಲಿಲ್ಲ. ಇದೀಗ ತಮ್ಮ 48ನೇ ವಯಸ್ಸಿನಲ್ಲಿ ಧನ್ಸಿಕಾ ಜೊತೆ ವಿವಾಹಕ್ಕೆ ಸಜ್ಜಾಗಿದ್ದಾರೆ. ಉಂಗುರ ಬದಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ
ಅಸಲಿಗೆ ಆಗಸ್ಟ್ 29ಕ್ಕೆ ವಿವಾಹವನ್ನೇ ಘೋಷಿಸಿದ್ದರು ವಿಶಾಲ್. ಹಿಂದೆ ಯೋಗಿಡಾ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ವಿಶಾಲ್ ಧನ್ಸಿಕಾ ಜೊತೆಗಿನ ಪ್ರೀತಿ ಖಚಿತಪಡಿಸಿ ಬಳಿಕ ಮದುವೆ ದಿನಾಂಕ ಘೋಷಿಸಿದ್ದರು. ಆದರೆ ಈ ದಿನ ಸಿನಿ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ನಿಶ್ಚಿತಾರ್ಥ ಮಾಡಿಕೊಂಡಿದ್ದರೂ ಮದುವೆ ದಿನವನ್ನು ಜೋಡಿ ಪ್ರಕಟಿಸಿಲ್ಲ.
ವಿಶಾಲ್ ಇದುವರೆಗೂ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಧನ್ಸಿಕಾ 15 ವರ್ಷಗಳಲ್ಲಿ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಲಾವಿದರ ಸಂಘ ನಾಡಿಗೇರ್ ಸಂಘದ ಜನರಲ್ ಕಾರ್ಯದರ್ಶಿಯಾಗಿರುವ ವಿಶಾಲ್ ಸಂಘದ ಕಟ್ಟಡ ಸಂಪೂರ್ಣವಾದ ಬಳಿಕ ಮದುವೆಯಾಗುವುದಾಗಿ ಘೋಷಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…