Featured

ನಟಿ ಸಾಯಿ ಧನಿಷ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ತಮಿಳು ಸ್ಟಾರ್ ನಟ ವಿಶಾಲ್ – vishwanews24

ನಟಿ ಸಾಯಿ ಧನಿಷ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ತಮಿಳು ಸ್ಟಾರ್ ನಟ ವಿಶಾಲ್

ತಮ್ಮ ಹುಟ್ಟುಹಬ್ಬದ ದಿನವೇ ತಮಿಳು ನಟ ವಿಶಾಲ್  ಅಭಿಮಾನಿಗಳಿಗೆ ಸರ್‌ಪ್ರೈಸ್‌ ನ್ಯೂಸ್ ಕೊಟ್ಟಿದ್ದಾರೆ. ನಟಿ ಸಾಯಿ ಧನ್ಸಿಕಾ  ಜೊತೆ ಚೆನ್ನೈನಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ಫೋಟೋಸ್‌ಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟ ವಿಶಾಲ್ ಹೆಸರು ಹಿಂದೆ ಹಲವು ನಟಿಯರ ಜೊತೆ ಥಳುಕು ಹಾಕಿಕೊಂಡಿದ್ದರೂ ಮದುವೆವರೆಗೆ ಬಂದಿರಲಿಲ್ಲ. ಇದೀಗ ತಮ್ಮ 48ನೇ ವಯಸ್ಸಿನಲ್ಲಿ ಧನ್ಸಿಕಾ ಜೊತೆ ವಿವಾಹಕ್ಕೆ ಸಜ್ಜಾಗಿದ್ದಾರೆ. ಉಂಗುರ ಬದಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ

 

ಅಸಲಿಗೆ ಆಗಸ್ಟ್ 29ಕ್ಕೆ ವಿವಾಹವನ್ನೇ ಘೋಷಿಸಿದ್ದರು ವಿಶಾಲ್. ಹಿಂದೆ ಯೋಗಿಡಾ ಚಿತ್ರದ ಟ್ರೇಲರ್‌ ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ವಿಶಾಲ್ ಧನ್ಸಿಕಾ ಜೊತೆಗಿನ ಪ್ರೀತಿ ಖಚಿತಪಡಿಸಿ ಬಳಿಕ ಮದುವೆ ದಿನಾಂಕ ಘೋಷಿಸಿದ್ದರು. ಆದರೆ ಈ ದಿನ ಸಿನಿ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ನಿಶ್ಚಿತಾರ್ಥ ಮಾಡಿಕೊಂಡಿದ್ದರೂ ಮದುವೆ ದಿನವನ್ನು ಜೋಡಿ ಪ್ರಕಟಿಸಿಲ್ಲ.

ವಿಶಾಲ್ ಇದುವರೆಗೂ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಧನ್ಸಿಕಾ 15 ವರ್ಷಗಳಲ್ಲಿ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಲಾವಿದರ ಸಂಘ ನಾಡಿಗೇರ್ ಸಂಘದ ಜನರಲ್ ಕಾರ್ಯದರ್ಶಿಯಾಗಿರುವ ವಿಶಾಲ್ ಸಂಘದ ಕಟ್ಟಡ ಸಂಪೂರ್ಣವಾದ ಬಳಿಕ ಮದುವೆಯಾಗುವುದಾಗಿ ಘೋಷಿಸಿದ್ದರು.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

18 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

25 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

31 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

54 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago