ಬೆಂಗಳೂರು : ಕನ್ನಡತಿ ಸೀರಿಯಲ್ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಿರಣ್ ರಾಜ್ ಅವರು ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದರು. ಈ ವೇಳೆ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದು, ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಕಿರಣ್ ರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕಾರಿನ ಬಲಭಾಗಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಸೆಪ್ಟೆಂಬರ್ 12ರಂದು ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನವೇ ಈ ರೀತಿಯ ದುರ್ಘಟನೆ ಸಂಭವಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…