ಮೈಸೂರು : ನಟ ದರ್ಶನ್ ಅವರ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿದ ಆರೋಪದಲ್ಲಿ ಬ್ಯಾಂಕ್ ನಕಲಿ ಮಹಿಳಾ ಅಧಿಕಾರಿ ಸೇರಿ ಮೂರು ಮಂದಿಯನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ದರ್ಶನ್ ಅವರ ಆಸ್ತಿ ಪತ್ರ ಮತ್ತು ಸಹಿಯನ್ನು ಫೋರ್ಜರಿ ಮಾಡಿ, ಬ್ಯಾಂಕಿನಲ್ಲಿ ರೂ.25 ಕೋಟಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಸೃಷ್ಟಿಸಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಟ ದರ್ಶನ್ ಅವರು ಭಾನುವಾರ ತಮ್ಮ ಸ್ನೇಹಿತರಾದ ದೂರುದಾರ ಹರ್ಷ ಮಲೆಂಟಾ, ನಿರ್ಮಾಪಕ ಉಮಾಪತಿ ಹಾಗೂ ಇತರರೊಂದಿಗೆ ಮೈಸೂರಿನ ಎನ್.ಆರ್.ಉಪ ವಿಭಾಗದ ಎಸಿಪಿ ಕಚೇರಿಗೆ ಖುದ್ದು ಹಾಜರಾಗಿದ್ದರು ಎನ್ನಲಾಗಿದೆ.
ನಿರ್ಮಾಪಕ ಉಮಾಪತಿ ಅವರು ಜೂನ್.16ರಂದು ಹರ್ಷ ಮಲೆಂಟಾಗೆ ಕರೆ ಮಾಡಿ ಕೆನರಾ ಬ್ಯಾಂಕಿನ ಮಾನ್ಯೇಜರ್ ಅರುಣಕುಮಾರಿ ನನಗೆ ಸಿಕ್ಕಿದ್ದು, ನೀನು ರೂ.25 ಕೋಟಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೀಯಾ? ಅದರ ಭದ್ರತೆಗಾಗಿ ನಿನ್ನ ಆಸ್ತಿ ಮತ್ತು ದರ್ಶನ್ ಆಸ್ತಿ ಪತ್ರಗಳನ್ನು ನಕಲು ಮಾಡಿ ಸಲ್ಲಿಸಿದ್ದೀಯಾ ಎಂದು ಕೇಳಿದ್ದು, ಗಾಬರಿಯಾದ ಹರ್ಷ ಬ್ಯಾಂಕಿನ ಅಧಿಕಾರಿಗೆ ಕರೆ ಮಾಡಿ ವಿಚಾರಿಸಿದಾಗ ಅದೇ ದಿನ ಅರುಣಕುಮಾರಿ, ಮಧುಕೇಶವ ಮತ್ತು ನಂದೀಶ ಎಂಬುವವರೊಂದಿಗೆ ಮೈಸೂರಿಗೆ ಬಂದು, ಕೆಲವು ಆಸ್ತಿಪತ್ರಗಳ ಜೆರಾಕ್ಸ್ ಪ್ರತಿಯನ್ನು ಹರ್ಷ ಮಲೆಂಟಾ ಅವರಿಗೆ ತೋರಿಸಿ ನೀವು ಗಣ್ಯವ್ಯಕ್ತಿಯೊಬ್ಬರ ಆಸ್ತಿಪತ್ರ ಫೋರ್ಜರಿ ಮಾಡಿದ್ದು, ಅದನ್ನು ಮಾಧ್ಯಮಗಳ ಮುಂದೆ ಹೇಳುವುದಾಗಿ ಬೆದರಿಸಿ ರೂ.25 ಲಕ್ಷಕ್ಕಾಗಿ ಬೇಡಿಕೆ ಇರಿಸಿ ಹೊರಟಿದ್ದಾರೆ.
ಇನ್ನು ಜೂನ್.17ರಂದು ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಬಂದಿದ್ದ ಮಹಿಳೆ ನಕಲಿ ಬ್ಯಾಂಕ್ ಮ್ಯಾನೇಜರ್ ಎಂಬುದು ದೃಢಪಟ್ಟಿದ್ದು, ಜುಲೈ 3ರಂದು ಹರ್ಷ ಮಾಲೆಂಟಾ ಅವರು ಮೈಸೂರಿನ ಹೆಬ್ಬಾಳ ಠಾಣೆಯಲ್ಲಿ ಅರುಣಕುಮಾರಿ, ಮಧುಕೇಶವ ಮತ್ತು ನಂದೀಶ ಎಂಬುವವರ ವಿರುದ್ಧ ದೂರು ನೀಡಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ದರ್ಶನ್, ನನ್ನ ಆಸ್ತಿ ಪತ್ರಗಳು ಫೋರ್ಜರಿ ಆಗಿರುವ ವಿಚಾರ 1 ತಿಂಗಳ ಹಿಂದೆ ತಿಳಿದಿತ್ತು. ಬಂಧಿತ ಆರೋಪಿ ಬಾಯಿ ಬಿಟ್ಟರೆ ಎಲ್ಲವೂ ಗೊತ್ತಾಗುತ್ತದೆ” ಎಂದು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…