ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಇತ್ತೀಚಿಗೆ ನಟ ದರ್ಶನ್ ಬಳ್ಳಾರಿ ಜೈಲಿಂದ ಬಿಡುಗಡೆಯಾಗಿದ್ದರು.ಇದೀಗ ಪೊಲೀಸರು ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪಿ ದರ್ಶನ್ಗೆ ಜಾಮೀನು ಮಂಜೂರು ವಿಚಾರವಾಗಿ ದರ್ಶನ್ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನ ವಿಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮೇಲ್ಮನವಿ ಸಲ್ಲಿಸಲು ಈಗಾಗಲೇ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಕನ್ನಡದಲ್ಲಿರುವ ಮಾಹಿತಿಯನ್ನು ಇಂಗ್ಲೀಷ್ ಗೆ ಭಾಷಾಂತರ ಮಾಡಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ನಟ ದರ್ಶನ್ ಎರಡು ದಿನ ಪತ್ನಿ ಮಗ ಹಾಗೂ ಕುಟುಂಬದ ಜೊತೆಗೆ ಕಾಲ ಕಳೆದರು. ನಂತರ ನೇರವಾಗಿ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹೈಕೋರ್ಟಿನ ಷರತ್ತಿನ ಮೇರೆಗೆ ಒಂದು ವಾರದಲ್ಲಿ ನಟ ದರ್ಶನ್ ಅವರ ವೈದ್ಯಕೀಯ ವರದಿ ಹೈಕೋರ್ಟಿಗೆ ನಟ ದರ್ಶನ್ ಅವರ ಪರ ವಕೀಲರು ಸಲ್ಲಿಸಿದ್ದಾರೆ. ಇದೀಗ ನಟ ದರ್ಶನ್ ಬಿಡುಗಡೆಯಾದರೂ ಕೂಡ ನೆಮ್ಮದಿ ಇಲ್ಲದಂತಾಗಿದ್ದು, ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…