Featured

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ

ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ  ನಟಿ ಹೇಮಾ ಮಾಲಿನಿ ಪತಿಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರ ನೀಡಿದ ಆರು ದಶಕಗಳ ಕೊಡುಗೆಯನ್ನು ಗೌರವಿಸಿ ಈ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಹೇಮಾ ಮಾಲಿನಿ ಗುಲಾಬಿ ಬಣ್ಣದ ಸೀರೆಯಲ್ಲಿ ಗಮನ ಸೆಳೆದರು. ಇದೇ ವೇಳೆ ಪುತ್ರಿ ಅಹಾನಾ ಡಿಯೋಲ್ ಭಾವುಕರಾಗಿ ಕಣ್ಣೀರಿಟ್ಟ ದೃಶ್ಯ ಎಲ್ಲರ ಗಮನ ಸೆಳೆಯಿತು.

ಇದನ್ನೂ ಓದಿ:

ಸಮಾರಂಭಕ್ಕೂ ಮುನ್ನ ಮಾತನಾಡಿದ ಹೇಮಾ ಮಾಲಿನಿ, ಧರ್ಮೇಂದ್ರ ಅವರಿಗೆ ಈ ಗೌರವ ಬಹಳ ಹಿಂದೆಯೇ ಸಿಗಬೇಕಿತ್ತು. ಆದರೂ ಈಗ ಸಿಕ್ಕಿರುವುದು ಸಂತೋಷದ ವಿಚಾರ. ಧರ್ಮೇಂದ್ರ ಕೇವಲ ನಟರಲ್ಲ, ಅವರು ಭಾರತೀಯ ಸಿನಿಮಾದ ಒಂದು ಸಂಸ್ಥೆ. ಅವರ ಸರಳತೆ, ಅಭಿನಯ ಹಾಗೂ ಭಾರತೀಯ ಸಂಸ್ಕೃತಿಯ ಮೌಲ್ಯಗಳು ಜನರ ಮನಸ್ಸು ತಲುಪಿವೆ ಎಂದು ಭಾವುಕರಾಗಿ ಹೇಳಿದರು.

ಚಿತ್ರರಂಗದ ಹೊರತಾಗಿಯೂ ಧರ್ಮೇಂದ್ರ ದೇಶದ ಭಾವನೆ, ಸಂಸ್ಕೃತಿ ಮತ್ತು ಮಾನವೀಯತೆಯ ಪ್ರತೀಕವಾಗಿದ್ದರು ಎಂದು ಅವರು ಹೇಳಿದರು. ಅವರ ಜೊತೆ ಹಲವು ಸಿನಿಮಾಗಳಲ್ಲಿ ನಟಿಸುವ ಅವಕಾಶ ನನಗೆ ಸಿಕ್ಕಿತ್ತು. ನಂತರ ನಾನು ಅವರ ಜೀವನ ಸಂಗಾತಿಯಾಗಿದ್ದೇ ನನ್ನ ಭಾಗ್ಯ ಎಂದರು.

ಇದನ್ನೂ ಓದಿ:

ಧಮೇಂದ್ರ ಮತ್ತು ಹೇಮಾ ಮಾಲಿನಿ 1980ರ ಮೇ 2ರಂದು ವಿವಾಹವಾಗಿದ್ದರು. ಧರ್ಮೇಂದ್ರ ಅವರು 2025ರ ನವೆಂಬರ್ 24ರಂದು ಮುಂಬೈನ ನಿವಾಸದಲ್ಲಿ ನಿಧನರಾದರು

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

31 minutes ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

51 minutes ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

1 hour ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

2 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

2 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

2 hours ago