ಬೆಂಗಳೂರು: ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಡಲಾಗಿದೆ ಎಂದು ನಟ ಪ್ರಕಾಶ್ ರಾಜ್ ಮಾಡಿರುವ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಸ್ಪಷ್ಟಪಡಿಸಿದೆ. ಪ್ರಕಾಶ್ ರಾಜ್ ಅವರು ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗಾರ್ಡನ್ ಅಪಾರ್ಟ್‌ಮೆಂಟ್ ವಿಳಾಸದಲ್ಲಿ ನೋಂದಾಯಿತರಾಗಿದ್ದರು.
ಆದರೆ ಬೂತ್ ಮಟ್ಟದ ಅಧಿಕಾರಿ ನಡೆಸಿದ ಪರಿಶೀಲನೆಯಲ್ಲಿ ಅವರು ಕಳೆದ ನಾಲ್ಕು ವರ್ಷಗಳಿಂದ ಆ ವಿಳಾಸದಲ್ಲಿ ವಾಸಿಸುತ್ತಿಲ್ಲ ಎಂಬುದು ತಿಳಿದುಬಂದಿದೆ. ಅಪಾರ್ಟ್‌ಮೆಂಟ್ ಮಾಲೀಕರು ಮತ್ತು ಪ್ರಾಪರ್ಟಿ ಮ್ಯಾನೇಜರ್ ಅವರ ಹೇಳಿಕೆ ಹಾಗೂ ಮಹಜರು ಆಧರಿಸಿ, ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಅವರ ಹೆಸರನ್ನು ಸ್ಥಳಾಂತರಗೊಂಡಿದೆ ಎಂದು ಗುರುತಿಸಲಾಗಿದೆ.
ಅಧಿಕಾರಿಗಳು ಪ್ರಕಾಶ್ ರಾಜ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅವರು ಪ್ರಸ್ತುತ ಅದೇ ಕ್ಷೇತ್ರದ ಬೇರೊಂದು ವಿಳಾಸದಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದಾರೆ. ಹೊಸ ವಿಳಾಸದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-ಆರು ಸಲ್ಲಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಜಗದೀಶ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…