ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ಸುಶಾಂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂಬ ಬಿಹಾರ ಸರ್ಕಾರದ ಶಿಫಾರಸನ್ನು ಒಪ್ಪಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಬುಧವಾರ ತಿಳಿಸಿತ್ತು.
ಈ ಪ್ರಕರಣವು ಸಿಬಿಐಗೆ ವರ್ಗಾವಣೆಯಾದ ಮರುದಿನವೇ ರಿಯಾ ಚಕ್ರವರ್ತಿ, ಇಂದ್ರಜಿತ್ ಚಕ್ರವರ್ತಿ, ಸಂಧ್ಯಾ ಚಕ್ರವರ್ತಿ, ಶೋಯಿಕ್ ಚಕ್ರವರ್ತಿ, ಸ್ಯಾಮ್ಯುಯೆಲ್ ಮಿರಾಂದಾ, ಶ್ರುತಿ ಮೋದಿ ಮತ್ತು ಇತರರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ರಿಯಾ ಚಕ್ರವರ್ತಿ ಹಣಕಾಸು ವಿಚಾರದಲ್ಲಿ ಸುಶಾಂತ್ಗೆ ಮೋಸ ಮಾಡಿದ್ದಾರೆ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಕಾರಣಕ್ಕೆ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ತಂದೆ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. ಪಟ್ನಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಅರ್ಜಿ ಸಲ್ಲಿಸಿದ್ದರು.
ರಿಯಾ ಚಕ್ರವರ್ತಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮೂರು ದಿನಗಳೊಳಗೆ ಅಭಿಪ್ರಾಯ ತಿಳಿಸುವಂತೆ ಸುಶಾಂತ್ ಅವರ ತಂದೆ ಕೃಷ್ಣ ಕಿಶೋರ್ ಸಿಂಗ್, ಮಹಾರಾಷ್ಟ್ರ ಹಾಗೂ ಬಿಹಾರ ಸರ್ಕಾರಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ. ಸುಶಾಂತ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಆಗಿರುವ ಪ್ರಗತಿ ಕುರಿತ ವರದಿಯನ್ನು ಸಲ್ಲಿಸುವಂತೆ ಮಹಾರಾಷ್ಟ್ರ ಪೊಲೀಸ್ಗೆ ಸೂಚಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…