ತುಮಕೂರು: ಶಿವಕುಮಾರ ಸ್ವಾಮೀಜಿ ಅವರ ದರ್ಶನಕ್ಕೆ ಸಿದ್ಧಗಂಗಾ ಮಠದತ್ತ ಮಂಗಳವಾರ ಭಕ್ತ ಸಾಗರವೇ ಹರಿದು ಬರುತ್ತಿದೆ.
ಹರಿದು ಬರುತ್ತಿರುವ ಭಕ್ತರು ಯಾವುದೇ ಅಡ್ಡಿ ಇಲ್ಲದೆ ದರ್ಶನ ಪಡೆಯುವಂತಾಗಲು ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಉದ್ದ ಸರದಿಯಲ್ಲಿ ಜನ ನಿಂತಿದ್ದು, ಗಂಟೆ ಗಂಟೆಗೂ ಜನರ ಸಂಖ್ಯೆ ಹೆಚ್ಚುತ್ತಲೇ ಇದೆ.
ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ಶಿವಕುಮಾರ ಸ್ವಾಮೀಜಿ ದರ್ಶನಕ್ಕೆ ಅವಕಾಶ. ನಂತರ ಸಮಯ ವಿಸ್ತರಣೆ ಇಲ್ಲ. 3.30ರ ಬಳಿಕ ಕ್ರಿಯಾಸಮಾಧಿ ಪ್ರಕ್ರಿಯೆ ನಡೆಯಲಿದೆ ಎಂದು ಕಿರಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಬರುವ ಭಕ್ತರಿಗೆ 10ಕ್ಕೂ ಹೆಚ್ಚು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಹಲವು ಹಳ್ಳಿಗಳ ಜನರು ಸ್ವಯಂ ಪ್ರೇರಿತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ತುಮಕೂರು ನಗರದಲ್ಲಿ ಅಘೋಷಿತ ಬಂದ್ ಏರರ್ಪಟ್ಟಿದ್ದು, ಬಹುತೇಕ ಅಂಗಡಿ ಮುಂಗಟ್ಟೆಗಳು ಮುಚ್ಚಿವೆ. ಹಲವು ಹೋಟೇಲ್‌ಗಳ ಮಾಲೀಕರು ಭಕ್ತರಿಗೆ ಉಚಿ ಉಪಹಾರ, ಊಟ ನೀಡುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…