ಮಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಶಾಸಕ ಸಂಜೀವ್ ಮಠಂದೂರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗುತ್ತಿದ್ದ, ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಶಾಸಕ ಸಂಜೀವ್ ಮಠಂದೂರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ಬೆನಲ್ಲೇ ಇದೀಗ ಫೋಟೋದಲ್ಲಿ ಇರುವ ಮಹಿಳೆ ಸಹ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಇಂದು (ಏಪ್ರಿಲ್ 06) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಿಳೆ, ನನ್ನ ವೈಯಕ್ತಿ ಫೋಟೋಗಳನ್ನು ಪುತ್ತೂರಿನ ಶಾಸಕರ ಫೋಟೋ ಜೊತೆ ಜೋಡಿಸಿದ್ದು, ಎಡಿಟ್ ಮಾಡಿದ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ. ಇದರಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತುಂಬಾ ನೋವಾಗಿದೆ. ಓರ್ವ ಮಹಿಳೆ ಮೇಲೆ ಈ ರೀತಿ ದೌರ್ಜನ್ಯ ಎಸಗುತ್ತಿದ್ದಾರೆ. ಶಾಸಕರಿಗೂ ನನಗೂ ಸಂಬಂಧವಿಲ್ಲ. ಆದರೂ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಈಗ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು ತೆಗೆದುಕೊಂಡು ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದ್ರೆ ನಾನು ಯಾವುದೇ ತಪ್ಪು ಮಾಡಿಲ್ಲ. ಎಡಿಟ್ ಮಾಡುವ ಕೌಶಲ್ಯತೆ ಜನರಲ್ಲಿ ಇದೆ. ಆದ್ರೆ, ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ. ಹಾಗೇ ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಯಾರು ಇದನೆಲ್ಲ ಮಾಡಿದ್ದಾರೆ ಅವರಿಗೆ ಸೂಕ್ತ ಶಿಕ್ಷೆ ಆಗಬೇಕೆಂದು ಮನವಿ ಮಾಡಿದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…