ಕೋಟ: ರಾಜ್ಯದ 30 ಜಿಲ್ಲೆಗಳ ಉಸ್ತುವಾರಿಯನ್ನು 16 ಸಚಿವರಿಗೆ ಹಂಚಬೇಕಾ ಗಿರುವುದರಿಂದ ಒಂದಷ್ಟು ಸಚಿವರಿಗೆ ಅಕ್ಕ-ಪಕ್ಕದ ಜಿಲ್ಲೆಯ ಹೊಣೆಗಾರಿಕೆ ನೀಡಲಾಗಿದೆ. ಇದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು ಯಾವುದೇ ಕಾರಣಕ್ಕೆ ಪ್ರಶ್ನಿಸಲಾರೆ; ನೀಡಿದ ಜವಬ್ದಾರಿಯನ್ನು ಪ್ರೀತಿಯಿಂದ ಸ್ವೀಕರಿಸಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅಭಿವೃದ್ಧಿಗೆ ಸಾಕಷ್ಟು ಅವಕಾಶವಿರುವ ರಾಜ್ಯದ ಜಿಲ್ಲೆಗಳಲ್ಲಿ ಬೆಂಗಳೂರಿನ ಅನಂತರದ ಸ್ಥಾನ ದ.ಕ. ಜಿಲ್ಲೆಗಿದೆ. 250 ಗ್ರಾ.ಪಂ.ಗಳಿವೆ. ನಮ್ಮದೇ ಪಕ್ಷದ 7 ಮಂದಿ ಶಾಸಕರು, ಸಂಸದರಿದ್ದಾರೆ. ರಾಜ್ಯದಲ್ಲೇ ಹೆಚ್ಚಿನ ಸಂಖ್ಯೆಯ ದೇಗುಲಗಳಿದ್ದು ಮುಜರಾಯಿ ಸಚಿವನಾಗಿರುವುದರಿಂದ ಅವುಗಳ ಅಭಿವೃದ್ಧಿಗೆ ಒತ್ತು ನೀಡುತ್ತೇನೆ.
ನನಗೆ ಉಡುಪಿ ಜಿಲ್ಲೆಯ ಉಸ್ತುವಾರಿ ಸ್ಥಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಈ ಜಿಲ್ಲೆಯನ್ನು ಮರೆಯಲಾರೆ. ನನ್ನ ಖಾತೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ಮರಳು ಸಮಸ್ಯೆಗೆ ಸಾಕಷ್ಟು ಹೋರಾಟ ನಡೆಸಿದ್ದು ಒಂದು ವಾರದಲ್ಲಿ 171 ಗುತ್ತಿಗೆದಾರರಿಗೆ ಮರಳು ಪರವಾನಿಗೆ ನೀಡಿ ಮನೆಬಾಗಿಲಿಗೆ ಮರಳು ದೊರೆಯುವಷ್ಟು ಕೆಲಸ ಕಾರ್ಯಗಳಾಗಿವೆ ಎಂದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…