Featured

ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ : ಹೆಚ್.ಡಿ ರೇವಣ್ಣ – vishwanews24

ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ : ಹೆಚ್.ಡಿ ರೇವಣ್ಣ

ಹಾಸನ: ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ, ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ  ಕಿಡಿಕಾರಿದ್ದಾರೆ.

ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್  ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಹೆಚ್.ಎಸ್ ಪ್ರಕಾಶನನ್ನು  ನಾಲ್ಕು ಬಾರಿ ಗೆಲ್ಲಿಸಿದ್ದರು. 2013ರಲ್ಲಿ ಪ್ರಕಾಶ್‌ಗೆ ಸೀಟ್ ಕೊಡಿಸಿಕೊಂಡು ಬಂದೆ, ಅಲ್ಪಸಂಖ್ಯಾತರಿಂದಾಗಿ ಪ್ರಕಾಶ್ ಸೋತರು ಎಂದು ಹೇಳಿದ್ದಾರೆ.

2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ದಡ್ಡನಲ್ಲ. ನಾನೇ ಅವರನ್ನು ಬಿಟ್ಟಿದ್ದೆ, ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.

ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್‌ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ಅದನ್ನು ತಗೊಂಡು ಬೇರೆ ಎಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತಾರೆ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago