Featured

ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ : ಶೋಭಾ ಕರಂದ್ಲಾಜೆ – Vishwanews24

ಹೈಕಮಾಂಡ್‌ ಬಗ್ಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ನನಗೆ ಟಿಕೆಟ್ ಸಿಗುತ್ತದೆ..

ಬೆಳಗಾವಿ: “ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, “ಪಿತೂರಿ ಮಾಡುವವರು ಮಾಡುತ್ತಿರುತ್ತಾರೆ, ಆದರೆ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ. ನನ್ನ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ನಾಯಕರು ಕಾರಣಗಳು, ನಾವು ಮಾಡಿದ ಕೆಲಸಗಳ ಬಗ್ಗೆ, ಇತರ ವಿಚಾರಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ವಿರೋಧದಿಂದ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳಿ ಸುಮ್ಮನಾಗುತ್ತಿದ್ದರು” ಎಂದು ಹೇಳಿದ್ದಾರೆ.

“ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕಿದಾಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಭರವಸೆ ವ್ಯಕ್ತಪಡಿಸಿದ್ದಾರೆ. ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ನಮ್ಮ ಶ್ರಮ, ನಮ್ಮ ಕೆಲಸವನ್ನು ಹೈಕಮಾಂಡ್ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ” ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

41 seconds ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

8 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

23 minutes ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

3 hours ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

3 hours ago