ಬೆಳಗಾವಿ: “ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, “ಪಿತೂರಿ ಮಾಡುವವರು ಮಾಡುತ್ತಿರುತ್ತಾರೆ, ಆದರೆ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ. ನನ್ನ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ನಾಯಕರು ಕಾರಣಗಳು, ನಾವು ಮಾಡಿದ ಕೆಲಸಗಳ ಬಗ್ಗೆ, ಇತರ ವಿಚಾರಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ವಿರೋಧದಿಂದ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳಿ ಸುಮ್ಮನಾಗುತ್ತಿದ್ದರು” ಎಂದು ಹೇಳಿದ್ದಾರೆ.
“ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕಿದಾಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಭರವಸೆ ವ್ಯಕ್ತಪಡಿಸಿದ್ದಾರೆ. ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ನಮ್ಮ ಶ್ರಮ, ನಮ್ಮ ಕೆಲಸವನ್ನು ಹೈಕಮಾಂಡ್ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ” ಎಂದು ಅವರು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…