ನನಗೆ ಮಾಟ ಮಾಡಿಸಿದ್ರೆ ಅವರಿಗೆ ಕೆಟ್ಟದ್ದಾಗುತ್ತೆ : ಎಚ್‍ಡಿ ರೇವಣ್ಣ
ಹಾಸನ: ನನ್ನದು ಸ್ವಾತಿ ನಕ್ಷತ್ರ. ನನಗೆ ಯಾರಾದರೂ ಮಾಟ ಮಾಡಿಸಲು ಪ್ರಯತ್ನಿಸಿದರೆ ಅವರಿಗೆ ತಿರುಗುಬಾಣವಾಗುತ್ತೆ ಎಂದು ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಸಿಗದ ಕಾರಣ ಪ್ರತಿನಿತ್ಯ ಹೊಳೆನರಸೀಪುರದಿಂದ ಬೆಂಗಳೂರಿಗೆ ಹೋಗಿ ಬರುತ್ತಿದ್ದೇನೆ. ಬಂಗಲೆ ಸಿಕ್ಕ ತಕ್ಷಣ ಅಲ್ಲಿಯೇ ವಾಸ್ತವ್ಯ ಹೂಡುತ್ತೇನೆ ಎಂದು ಹೇಳಿದರು.
ಬಜೆಟ್ ಕುರಿತು ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಎರಡು-ಮೂರು ದಿನ ಕಾಯಿರಿ. ಯಾವ ಜಿಲ್ಲೆಗೆ ಎಷ್ಟು ಅನುಕೂಲವಾಗಿದೆ ಎಂಬುದನ್ನು ಹೇಳುತ್ತೇನೆ. ರಾಜ್ಯದ ರೈತರ ಸಾಲಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆಸಿದ್ದರು. ಮೋದಿಯವರು ಹಣ ನೀಡುವ ಭರವಸೆಯನ್ನೂ ನೀಡಿದ್ದರು. ಆದರೆ ರಾಜ್ಯದ ಬಿಜೆಪಿ ನಾಯಕರು ಹಣ ನೀಡದಂತೆ ಅಡ್ಡಿಪಡಿಸಿದರು ಎಂದು ಆರೋಪಿಸಿದರು.
