ರಾಜ್ಯ ನ್ಯೂಸ್

ನನಗೆ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ: ಕುಮಾರಸ್ವಾಮಿ

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರಕಾರವು ಆಸ್ತಿತ್ವದಲ್ಲಿದ್ದು, ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಮುಖ್ಯಮಂತ್ರಿ ಸ್ಥಾನದ ಕುರಿತು ಮಾತನಾಡಿದ ಕುಮಾರಸ್ವಾಮಿ, ನನಗೆ ಮುಖ್ಯಮಂತ್ರಿಯಾಗಲು ಇಷ್ಟ ಇರಲಿಲ್ಲ. ಆದರೆ ಅನಿವಾರ್ಯ ಸಂದರ್ಭಗಳು ಸೃಷ್ಟಿಯಾದ ಕಾರಣ ನಾನು ಸಮ್ಮಿಶ್ರ ಸರಕಾರದ ಈ ಹುದ್ದೆಯನ್ನು ಸ್ವೀಕರಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಾಂಧಿ ಭವನದಲ್ಲಿ ಸೋಮವಾರ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ನಾನು ಮುಖ್ಯಮಂತ್ರಿ ಆಗುವುದು ದೇವೇಗೌಡರಿಗೂ ಬೇಡವಾಗಿತ್ತು. ನನ್ನ ಮಗನ ಆರೋಗ್ಯ ಸರಿ ಇಲ್ಲ. ಎರಡು ಬಾರಿ ಹಾರ್ಟ್‌ ಆಪರೇಷನ್‌ ಆಗಿದೆ. ನಿಮ್ಮಲ್ಲೇ ಯಾರನ್ನಾದರೂ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ತಂದೆಯವರು ಹೇಳಿದ್ದರು.

ಆದರೆ, ಇಲ್ಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್‌ ಮುಖಂಡರು ಪಟ್ಟು ಹಿಡಿದರು. ಹಾಗಾಗಿ, ಅನಿವಾರ್ಯ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದರು. ಭ್ರಷ್ಟಾಚಾರ ಆರಂಭವಾಗುವುದಕ್ಕೆ ವರ್ಗಾವಣೆ ಮೂಲ ಬೇರು. ವಿಧಾನಸೌಧದಲ್ಲಿ ವರ್ಗಾವಣೆ ಧಂದೆಗೆ ಮಧ್ಯವರ್ತಿಗಳಿದ್ದಾರೆ. ಈ ಜಾಲ ಬಹಳ ವ್ಯವಸ್ಥಿತವಾಗಿ ಮತ್ತು ಅಷ್ಟೇ ಗಟ್ಟಿಯಾಗಿದೆ. ಆದಾಗ್ಯೂ ಈ ಭ್ರಷ್ಟಾಚಾರದ ಕಡಿವಾಣಕ್ಕೆ ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತೇನೆ ಎಂದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

29 minutes ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

38 minutes ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

21 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

23 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

23 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

23 hours ago