ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ.
ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು.
ಮುಂದಿನ ಸಿಎಂ ಯಾರು ಎಂಬ ಹೆಸರನ್ನ ಹೇಳದ ಸಿದ್ದರಾಮಯ್ಯ, ಮುಂದೆ ಯಾರು ಆಗುತ್ತಾರ ಎನ್ನುವುದನ್ನು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ನಾಯಕರು ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಅವರೇ ಎಲ್ಲ ಮುಂದಿನ ಪ್ರಕ್ರಿಯೆ ನಡೆಸುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯನವರು ಈ ರೀತಿ ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್ ಕಣ್ಣಂಚಲಿ ನೀರು ಬಂದಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೆ ಡಿಕೆಶಿ ಭಾವುಕರಾದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಉಪಹಾರ ಸಭೆಗೂ ಮೊದಲು ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…