Featured

ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ : ಶ್ರೀರಾಮುಲು  – vishwanews24

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ : ಶ್ರೀರಾಮುಲು

ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಬಗ್ಗೆ ಕೋಲಾರದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಇದ್ದರೆ, ಆಕಸ್ಮಿಕವಾಗಿ ಬದಲಾವಣೆಯಾದರೆ ನಾನು ರಾಜ್ಯಾಧ್ಯಕ್ಷನಾಗಲು ಸಿದ್ಧ. ಬಸನಗೌಡ ಯತ್ನಾಳ್ ನಮ್ಮ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನಮ್ಮ ಹೆಸರು ಪ್ರಸ್ತಾಪ ಮಾಡಿರುವುದು ಸಂತೋಷ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದಕ್ಕೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.

ಯಡಿಯೂರಪ್ಪ ಅವರಿಂದ ಬೆಳೆದಿದ್ದೇವೆ. ಅವರು ಮನಸ್ಸು ಮಾಡಿ ನನಗೆ ಅವಕಾಶಕೊಟ್ಟರೆ ರಾಜ್ಯದ 224 ಕ್ಷೇತ್ರದಲ್ಲಿ ಸಂಘಟನೆ ಮಾಡಿ ಭಿನ್ನಾಭಿಪ್ರಾಯ ಶಮನ ಮಾಡುವೆ. ಮುಂಬರುವ 2028ರಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ಕೆಲಸ ಮಾಡುತ್ತೇನೆ. ಯಡಿಯೂರಪ್ಪ ಅವರ ಆಶೀರ್ವಾದ ಬೇಕಾಗಿದೆ. ಒಂದು ವೇಳೆ ಹೈಕಮಾಂಡ್ ಬದಲಾವಣೆ ಮಾಡಿದರೆ ನಾನು ಸಿದ್ಧ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು, ಇರುವ ಗೊಂದಲ ನಿವಾರಣೆಯಾಗಬೇಕು. ದೆಹಲಿಗೆ ಹೋಗಿರುವವರನ್ನು ಸಮಾಧಾನ ಮಾಡಬೇಕಾಗಿದೆ. ದಕ್ಷಿಣ ಭಾರತದ ಭೀಷ್ಮರಾಗಿರುವ ಯಡಿಯೂರಪ್ಪ ಮುಂದಾಳತ್ವ ತೆಗೆದುಕೊಳ್ಳಬೇಕಾಗಿದೆ. ವಿಜಯೇಂದ್ರ ಅವರು ಹೊಸದಾಗಿ ಅಧ್ಯಕ್ಷರಾಗಿದ್ದು, ಅನುಭವದ ಕೊರತೆಯಾಗಿದೆ. ಈ ಹಿನ್ನೆಲೆ ಯಡಿಯೂರಪ್ಪ ಮುಂದೆ ಬರಬೇಕು ಎಂದು ನುಡಿದರು.

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

5 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

6 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

6 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

6 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

7 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

7 hours ago