ರಾಜ್ಯ ನ್ಯೂಸ್

ನನಗೆ ಸ್ಥಾನ ಕೊಡದಿರುವುದು ಕಾಂಗ್ರೆಸ್ಸಿಗೆ ಅತೀ ದೊಡ್ಡ ನಷ್ಟವಾಗಲಿದೆ: ಬಿ.ಸಿ. ಪಾಟೀಲ್ ಅಸಮಾಧಾನ

ಬೆಂಗಳೂರು: ಸಚಿವ ಸಂಪುಟ ರಚನೆ ಕಸರತ್ತಿನಲ್ಲಿ ಕೊನೆಗೂ ಕಾಂಗ್ರೆಸ್ ತಮ್ಮ ಸಚಿವರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಾಸಕ ಬಿಸಿ ಪಾಟೀಲ್ ಅವರ ಹೆಸರನ್ನು ಕೈಬಿಡಲಾಗಿದೆ. ಇದರಿಂದ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಮಾತನಾಡಿದ ಅವರು, ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮೂರನೇ ಬಾರಿ ಗೆದ್ದಿದ್ದೇನೆ. ನಾನು ಏಕೈಕ ಶಾಸಕನಾಗಿದ್ದರೂ, ನನಗೆ ಸಚಿವ ಸ್ಥಾನ ಕೊಡಲಿಲ್ಲ. ಇದರಿಂದ ನಮ್ಮ ಜಿಲ್ಲೆಯವರಿಗೆ ಬೇಸರವಾಗಿದೆ. ಇನ್ನು ಮುಂದೆ ಅವರು ಹೇಗೆ ಕಾಂಗ್ರೆಸ್ ಗೆ ಬೆಂಬಲಿಸುತ್ತಾರೆ. ಯಾವ ರೀತಿ ಪಟ್ಟಿ ಆಯ್ಕೆ ಮಾಡಿದ್ದಾರೆ ನನಗೆ ತಿಳಿದಿಲ್ಲ ಎಂದು ಆಕ್ರೋಶದಿಂದ ಹೇಳಿದ್ದಾರೆ.

ಬಿಜೆಪಿಯವರು ಸಚಿವ ಸ್ಥಾನ, ಆಸೆ ಆಮಿಷ ಒಡ್ಡಿದ್ರೂ, ನಾನು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ಬಹುಶಃ ನಾನು ನಿಷ್ಠೆಯಿಂದ ಮಾಡಿದ ಕೆಲಸಕ್ಕೆ ಸಿಕ್ಕ ಪ್ರತಿಫಲ ಇದಾಗಿದೆ. ಹಣಕ್ಕಾಗಿ, ಅಧಿಕಾರಕ್ಕಾಗಿ ಆಸೆ ಪಡುವ ವ್ಯಕ್ತಿಯಲ್ಲ ನಾನು. ಅಂತಹ ಭಾವನೆ ನನಗೆ ಇಲ್ಲ, ಆದರೆ ನನಗೆ ನ್ಯಾಯವಾಗಿ ಸಿಗಬೇಕಾದ ಸ್ಥಾನ ಸಿಕ್ಕಿಲ್ಲ. ಇದರಿಂದ ನನಗೆ ನೋವಾಗಿದೆ. ನನ್ನ ಬೆಂಬಲಿಗರಿಗೂ ನೋವಾಗಿದೆ ಎಂದು ಬೇಸರದಿಂದ ಹೇಳಿದರು.

ಸಚಿವರ ಪಟ್ಟಿಯಿಂದ ವೈಯಕ್ತಿಯವಾಗಿ ನನಗೆ ನಷ್ಟವಾಗಿಲ್ಲ. ಕಾಂಗ್ರೆಸ್ ಪಕ್ಷ ದೊಡ್ಡ ನಷ್ಟ ಅನುಭವಿಸುತ್ತದೆ. ನಾನು ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿಲ್ಲ. ಕಾಂಗ್ರೆಸ್ ನ ಆಡಳಿತ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದೇನೆ ಎಂದು ಹೇಳಿದರು.

ನನಗೆ ಯಾವುದೇ ಗಾಡ್ ಫಾದರ್ ಇಲ್ಲ. ಹಣ ಕೂಡ ಇಲ್ಲ ಅದಕ್ಕಾಗಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಬರಲ್ಲ. ಬಂದರೆ ನೋಡೋಣ. ಬರಲಿಲ್ಲ ಅಂದರೆ ಜನರು ಶಾಸಕರಾಗಿ ಗೆಲ್ಲಿಸಿದ್ದಾರೆ. ಅವರ ಕೆಲಸ ಮಾಡುತ್ತೇನೆ. ನಾನು ಬಹಳಷ್ಟು ಪ್ರಯಾಣಿಕವಾಗಿ ಇದ್ದೆ. ಈಗ ಅದೇ ತ್ಪಪ್ಪಾಯಿತು ಅಂತ ವಿಷಾದ ವ್ಯಕ್ತಪಡಿಸಿದ್ರು.

Vishwa News 24

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ -vishwanews24

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…

9 minutes ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

16 minutes ago

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

22 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago