Featured

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ : ಸಿಎಂ – vishwanews24

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ : ಸಿಎಂ

ಕೆ.ಆರ್.ಪೇಟೆ:ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿ, GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು.ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.

ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.

ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು‌. ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago