ಕೆ.ಆರ್.ಪೇಟೆ:ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿ, GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.
ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ ರೈತರಿಗೂ ಸಿಗಬೇಕು.ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.
ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.
ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.
ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು. ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…