ನವದೆಹಲಿ: ನನ್ನನ್ನು ಕಂಡರೆ ಎಲ್ಲಿ ಅಪ್ಪಿಕೊಳ್ಳುತ್ತಾರೋ ಅಂತಾ ಬಿಜೆಪಿಯವರು ದೂರ ಸರಿಯುತ್ತಿದ್ದಾರೆ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಲೋಕಸಭೆಯಲ್ಲಿ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ಅಪ್ಪಿಕೊಂಡ ವಿಚಾರದ ಬಗ್ಗೆ ಈಗಲೂ ಪರ-ವಿರೋಧ ಚರ್ಚೆ ನಡೆಯುತ್ತಿದ್ದು, ಇದೀಗ ಮೋದಿ ಆಲಿಂಗನವನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ.
ಕರಣ್ ಥಾಪರ್ ಅವರ ಡೆವಿಲ್ಸ್ ಅಡ್ವೋಕೇಟ್ ಅನ್ ಟೋಲ್ಡ್ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿಯೇ ಉಪಸ್ಥಿತರಿದ್ದ ಅಡ್ವಾಣಿ ಅವರನ್ನು ಉದ್ದೇಶಿಸಿ ರಾಜಕೀಯವಾಗಿ ನಮ್ಮ ನಡುವೆ ಏನೇ ಭಿನ್ನಾಭಿಪ್ರಾಯ ಇರಬಹುದು. ಹಾಗಂತ ದ್ವೇಷ ಸಾಧಿಸಲ್ಲ. ಅವರನ್ನ ಅಪ್ಪಿಕೊಂಡು ಪ್ರೀತಿ ತೋರುತ್ತೇನೆ ಅಂತ ಹೇಳುವ ಮೂಲಕ ತಾನು ಪ್ರಧಾನಿ ಮೋದಿಯವರನ್ನು ಅಪ್ಪಿಕೊಂಡ ವಿಚಾರವನ್ನು ಸಮರ್ಥಿಸಿಕೊಂಡರು.
ಇದೇ ವೇಳೆ ನಾನು ಮೋದಿಯವರನ್ನು ಅಪ್ಪಿಕೊಂಡ ಬಳಿಕ ಇದೀಗ ಬಿಜೆಪಿಯವರು ನನ್ನ ಕಂಡ್ರೆ ಎಲ್ಲಿ ಅಪ್ಪಿಕೊಳ್ಳುತ್ತಾನೋ ಅಂತ ದೂರ ಸರಿಯುತ್ತಾರೆ ಅಂತ ರಾಹುಲ್ ತಮಾಷೆಯ ಮಾತುಗಳನ್ನಾಡಿದ್ರು.
ಕಳೆದ ಶುಕ್ರವಾರ ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರನ್ನು ಸೋಲಿಸಲು ನಿಮ್ಮ ಪಕ್ಷದಲ್ಲಿಯೇ ಷಡ್ಯಂತ್ರ ರಚಿತವಾಗಿದೆ. ಬಿಜೆಪಿ, ಆರ್ ಎಸ್ಎಸ್ ಗಳಿಗೆ ನಾನು ತುಂಬಾ ಆಭಾರಿಯಾಗಿದ್ದೇನೆ. ನನಗೆ ಹಿಂದೂಸ್ತಾನ್, ಭಾರತ, ಹಿಂದೂ, ನನ್ನ ಧರ್ಮದ ಬಗ್ಗೆ ಹೇಳಿಕೊಟ್ಟಿದ್ದೀರಿ. ನಾನು ಈ ವಿಷಯಕ್ಕಾಗಿ ನಿಮಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳುತ್ತಾ ನೇರವಾಗಿ ಮೋದಿಯವರ ಬಳಿ ತೆರಳಿ ಅಪ್ಪಿಕೊಂಡು ಕೈ ಕುಲುಕಿ ಬರುವ ಮೂಲಕ ಲೋಕಸಭೆಯಲ್ಲಿ ಅಚ್ಚರಿ ಮೂಡಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…