Featured

ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ , ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ : ಡಿ.ವಿ. ಸದಾನಂದಗೌಡ – Vishwanews24

ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ , ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ : ಡಿ.ವಿ. ಸದಾನಂದಗೌಡ

ಬೆಂಗಳೂರು: ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ನಿನ್ನೆ ಬಂದು ಭೇಟಿ ಮಾಡಿ ಚರ್ಚೆ ಮಾಡಿ ಆಫರ್ ನೀಡಿದ್ದಾರೆ. ನಾನು ಈ ಬಗ್ಗೆ ಮನೆಯವರೊಂದಿಗೆ ಮಾತನಾಡಿ, ನಾಳೆ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಸಂಸದ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ. ಇಂದು ನನ್ನ ಹುಟ್ಟುಹಬ್ಬವಿದೆ. ಹಾಗಾಗಿ, ಕಾಂಗ್ರೆಸ್ ನಾಯಕರು ಬಂದು ಭೇಟಿ ಮಾಡಿದ ಬಗ್ಗೆ ಕುಟುಂಬದ ಜೊತೆಗೆ ಮಾತುಕತೆ ಮಾಡಬೇಕಿದೆ. ಇಂದು ಮನೆಯರವರೊಂದೊಗೆ ಚರ್ಚೆ ಮಾಡಿದ ಬಳಿಕ ನಾಳೆ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸುತ್ತೇನೆ. ನಾನು ನನ್ನ ನಿಲುವು ತಿಳಿಸುತ್ತೇನೆ. ನನ್ನ ಪಕ್ಷದ ಪ್ರಮುಖರೊಬ್ಬರು ನನ್ನ ಜೊತೆಗೆ ಸಮಾಲೋಚನೆ ಮಾಡಿದ್ದಾರೆ. ನಿನ್ನೆ ನಮ್ಮ ಮನೆಗೆ ಆಗಮಿಸಿ, ಮಾತುಕತೆ ಮಾಡಿದ್ದಾರೆ. ಅವರು ಹೇಳಿರುವ ಮಾತನ್ನು ನಾನು ಈಗ ಹೇಳಲು ಆಗಲ್ಲ. ನಿಮಗೆ ಏನೇ ಸುದ್ದಿ ಬಂದರೂ ಅರ್ಧ ಘಂಟೆ, ಒಂದು ಘಂಟೆ ಮಾತ್ರ. ನಾಳೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕರು ಚರ್ಚೆ ಮಾಡಿದ್ದರೂ ನಾನು ಯಾವುದೇ ನಿರ್ಧಾರವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ನನ್ನ ನಿರ್ಧಾರಗಳನ್ನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ನಂತರ, ನಾನು ಮುಂದಿನ ತೀರ್ಮಾನವನ್ನು ಬಹಿರಂಗವಾಗಿ ಹೇಳುತ್ತೇನೆ. ಬೆಂಗಳೂರು ಉತ್ತರದಲ್ಲಿ ಶೇ.100 ನನ್ನ ಹೆಸರು ಮಾತ್ರ ಬಂತು. ದೆಹಲಿ ಹಾಗೂ ಸ್ಥಳೀಯವಾಗಿ ಒಂದಷ್ಟು ವಿದ್ಯಮಾನ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ನಿಮಗೇ ಟಿಕೆಟ್ ಅಂತ ಹೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ನಾಳೆ ಸುದ್ದಿಗೋಷ್ಟಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ, ನಾಳೆಗೆ ಏನೂ ಉಳಿಯಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ.. ತಿಳಿದೂ ಹೀಗೆ ಮಾಡಿರೋದು ಬೇಜಾರು ತಂದಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸದಾನಂದಗೌಡ ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago