ಬೆಂಗಳೂರು: ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ನಿನ್ನೆ ಬಂದು ಭೇಟಿ ಮಾಡಿ ಚರ್ಚೆ ಮಾಡಿ ಆಫರ್ ನೀಡಿದ್ದಾರೆ. ನಾನು ಈ ಬಗ್ಗೆ ಮನೆಯವರೊಂದಿಗೆ ಮಾತನಾಡಿ, ನಾಳೆ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಸಂಸದ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ. ಇಂದು ನನ್ನ ಹುಟ್ಟುಹಬ್ಬವಿದೆ. ಹಾಗಾಗಿ, ಕಾಂಗ್ರೆಸ್ ನಾಯಕರು ಬಂದು ಭೇಟಿ ಮಾಡಿದ ಬಗ್ಗೆ ಕುಟುಂಬದ ಜೊತೆಗೆ ಮಾತುಕತೆ ಮಾಡಬೇಕಿದೆ. ಇಂದು ಮನೆಯರವರೊಂದೊಗೆ ಚರ್ಚೆ ಮಾಡಿದ ಬಳಿಕ ನಾಳೆ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸುತ್ತೇನೆ. ನಾನು ನನ್ನ ನಿಲುವು ತಿಳಿಸುತ್ತೇನೆ. ನನ್ನ ಪಕ್ಷದ ಪ್ರಮುಖರೊಬ್ಬರು ನನ್ನ ಜೊತೆಗೆ ಸಮಾಲೋಚನೆ ಮಾಡಿದ್ದಾರೆ. ನಿನ್ನೆ ನಮ್ಮ ಮನೆಗೆ ಆಗಮಿಸಿ, ಮಾತುಕತೆ ಮಾಡಿದ್ದಾರೆ. ಅವರು ಹೇಳಿರುವ ಮಾತನ್ನು ನಾನು ಈಗ ಹೇಳಲು ಆಗಲ್ಲ. ನಿಮಗೆ ಏನೇ ಸುದ್ದಿ ಬಂದರೂ ಅರ್ಧ ಘಂಟೆ, ಒಂದು ಘಂಟೆ ಮಾತ್ರ. ನಾಳೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದರೂ ನಾನು ಯಾವುದೇ ನಿರ್ಧಾರವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ನನ್ನ ನಿರ್ಧಾರಗಳನ್ನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ನಂತರ, ನಾನು ಮುಂದಿನ ತೀರ್ಮಾನವನ್ನು ಬಹಿರಂಗವಾಗಿ ಹೇಳುತ್ತೇನೆ. ಬೆಂಗಳೂರು ಉತ್ತರದಲ್ಲಿ ಶೇ.100 ನನ್ನ ಹೆಸರು ಮಾತ್ರ ಬಂತು. ದೆಹಲಿ ಹಾಗೂ ಸ್ಥಳೀಯವಾಗಿ ಒಂದಷ್ಟು ವಿದ್ಯಮಾನ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ನಿಮಗೇ ಟಿಕೆಟ್ ಅಂತ ಹೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ನಾಳೆ ಸುದ್ದಿಗೋಷ್ಟಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ, ನಾಳೆಗೆ ಏನೂ ಉಳಿಯಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ.. ತಿಳಿದೂ ಹೀಗೆ ಮಾಡಿರೋದು ಬೇಜಾರು ತಂದಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸದಾನಂದಗೌಡ ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…