ನವದೆಹಲಿ: “ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ…?” ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ.
ಯಾವ ಕೋರ್ಟ್ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ ನನ್ನನ್ನು ಮುಟ್ಟಲಾರರು ಎಂದಿದ್ದಾನೆ.
ಅಹಮದಾಬಾದ್ ಅಪಹರಣ ಮತ್ತು ಅತ್ಯಾಚಾರ ಪ್ರಕರಣವೊಂದರಲ್ಲಿ ಗುಜರಾತ್ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸಿದ್ದಾರೆ.
ನಿತ್ಯಾನಂದ ಅಜ್ಞಾತ ಸ್ಥಳದಿಂದ ಹೊಸ ವಿಡಿಯೊ ಸಂದೇಶ ಹರಿಬಿಟ್ಟಿದ್ದು, ಅದೀಗ ವೈರಲ್ ಆಗಿದೆ. ”ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ. ಯಾವ ನ್ಯಾಯಾಲಯವೂ ನನ್ನನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ.ಸತ್ಯವೇನೆಂದು ನಾನು ಜಗತ್ತಿಗೆ ತೋರಿಸುತ್ತೇನೆ. ನಾನು ಪರಮಶಿವ” ಎಂದು ನಿತ್ಯಾನಂದ ಹೇಳುತ್ತಿರುವುದು ವಿಡಿಯೊದಲ್ಲಿದೆ. ಅಜ್ಞಾತ ಸ್ಥಳದಿಂದ ಈ ವಿಡಿಯೊ ಟ್ವೀಟ್ ಮಾಡಲಾಗಿದೆ.
ವಿವಾದಿತ ದೇವಮಾನವ ನಿತ್ಯಾನಂದ ಸ್ವಾಮಿಯ ಪಾಸ್ಪೋರ್ಟ್ ಅರ್ಜಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರಸ್ಕರಿಸಿತ್ತು. ವಿದೇಶದಲ್ಲಿ ನಿತ್ಯಾನಂದನ ಚಲನವಲನಗಳು ಮತ್ತು ಆತನ ಪೋಸ್ಟ್ಗಳನ್ನು ಇಲಾಖೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…