ವಿಜಯಪುರ : ”ನನ್ನಲ್ಲಿ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆಗಳು ಇದೆ. ಹಾಗಿರುವಾಗ ನಾನ್ಯಾಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಬಾರದು? ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ನನ್ನ ಹೆಸರು ಏಕೆ ಇರಬಾರದು?” ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಶ್ನಿಸಿದ್ದಾರೆ.
ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ನಾನು ಸಿಎಂ ಸ್ಥಾನಕ್ಕೆ ಸಮರ್ಥವಾದವನು, ಹಾಗಿರುವಾಗ ಆಕಾಂಕ್ಷಿಯಾಗುವುದಲ್ಲಿ ತಪ್ಪೇನಿಲ್ಲ” ಎಂದು ಹೇಳಿದ ಅವರು, ”ಮುಂದೆ ಚುನಾವಣೆಯಲ್ಲಿ ಹೈಕಮಾಂಡ್ ಅವಕಾಶ ನೀಡಿದರೆ, ನಾನು ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗೆಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿಯ ಆರ್ಥಿಕ ಸಮಿತಿಯ ವಿಚಾರ ವಿನಿಮಯ -Vishwanews24
”ನಾನೇನು ಭೂಹಗರಣ ಅಥವಾ ಯಾವುದೇ ಹಗರಣ ಮಾಡಿಲ್ಲ. ನನ್ನ ವಿರುದ್ದ ಯಾವುದೇ ಭ್ರಷ್ಟಾಚಾರ ಆರೋಪವೂ ಇಲ್ಲ. ಹಾಗಾಗಿ ನನ್ನಲ್ಲಿ ಸಿಎಂ ಆಗುವ ಎಲ್ಲಾ ಅರ್ಹತೆಗಳು ಇದೆ. ಮುಖ್ಯಮಂತ್ರಿಯಾಗಲು ಉತ್ತರ ಕರ್ನಾಟಕದವರೂ ಕೂಡಾ ಸಮರ್ಥರು, ವಿಜಯಪುರ ಜಿಲ್ಲೆಯವನಾದ ನಾನು ಮುಖ್ಯಮಂತ್ರಿಯಾಗಲು ಸಮರ್ಥನು” ಎಂದಿದ್ದಾರೆ.
”ಇನ್ನು ನಾನು ಮುಖ್ಯಮಂತ್ರಿ ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಗೌರವ ತರುವ ಕಾರ್ಯವನ್ನು ಮಾಡುತ್ತೇನೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆ ಉತ್ತಮವಾದ ಆಡಳಿತವನ್ನು ನಾನು ನಮ್ಮ ರಾಜ್ಯದಲ್ಲಿ ನಡೆಸುತ್ತೇನೆ” ಎಂದು ಕೂಡಾ ಹೇಳಿದ್ದಾರೆ.
ತಿಂಗಳ ಮಾಧ್ಯಮ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ-vishwanews24
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…