ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.
2028ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ : ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಬಗ್ಗೆ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…