ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಎಂದು ಟ್ವೀಟ್ ಮಾಡಿದ್ದಾರೆ.
ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು – ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ” ಎಂದು ಟ್ವೀಟ್ ಮಾಡಿದ್ದಾರೆ.
ಸೋಮವಾರ ಪೈಲ್ವಾನ್ ಚಿತ್ರ ಪೈರಸಿಯಾಗಿದೆ ಎಂದು ಚಿತ್ರದ ನಿರ್ಮಾಪಕಿ ಸ್ವಪ್ನ ಕೃಷ್ಣ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.
ಪೈಲ್ವಾನ್ ಚಿತ್ರ ಬಿಡುಗಡೆಯಾದಾಗಿನಿಂದ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆವೊಂದು ನಡೆಯುತ್ತಿದೆ. ಪೈಲ್ವಾನ್ ಸಿನಿಮಾ ಚೆನ್ನಾಗಿದೆ. ಆದರೂ, ದರ್ಶನ್ ಅಭಿಮಾನಿಗಳು ಚೆನ್ನಾಗಿಲ್ಲ ಎಂದು ಖಾಲಿ ಚಿತ್ರಮಂದಿರಗಳ ಸುಳ್ಳು ಫೋಟೊಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸುದೀಪ್ ಅಭಿಮಾನಿಗಳು ಆರೋಪಿಸಿದ್ದಾರೆ. ಅಲ್ಲದೆ, ಪೈರಸಿಯನ್ನು ಮಾಡಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ದರ್ಶನ್ ಅಭಿಮಾನಿಗಳು ಸುಮ್ಮನೇ ನಮ್ಮ ಮೇಲೆ ಗೂಬೆ ಕೂರಿಸಬೇಡಿ. ತಮಿಳು ರಾಕರ್ಸ್ ವೆಬ್ಸೈಟ್ನಲ್ಲಿ ಚಿತ್ರ ಲೀಕ್ ಆಗಿದೆ. ಅವರನ್ನು ಕೇಳುವುದನ್ನು ಬಿಟ್ಟು ನಮ್ಮ ಮೇಲೆ ಸವಾರಿ ಮಾಡಬೇಡಿ ಎಂದು ಜಾಲತಾಣದಲ್ಲಿ ಸಂದೇಶವನ್ನು ಹರಿಬಿಟ್ಟಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…