Featured

ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ : ಸಿದ್ದರಾಮಯ್ಯ – Vishwanews24

ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ

ಬಂದಿದೆ : ಸಿದ್ದರಾಮಯ್ಯ

ಮೈಸೂರು: ‘ದಾವಣಗೆರೆಯಲ್ಲಿ ನಡೆದ ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ’ ಎಂದು‌ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಭಯ ಬಂದಿರುವುದರಿಂದಲೇ ಇನ್ನೂ ವ್ಯರ್ಥ ಟೀಕೆಗಳನ್ನು ‌ಮಾಡುತ್ತಿದ್ದಾರೆ’ ಎಂಟು ಟೀಕಿಸಿದರು.

‘ಅಹಿಂದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಸಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆ ಮಾತಿನಲ್ಲಿ ಸತ್ಯವಿರುತ್ತದೆ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ದಲಿತರ ಮತಗಳು ಕಾಂಗ್ರೆಸ್ ಪರವಾಗಿ ಇರುತ್ತವೆ. ಆ ಕಾರಣದಿಂದ ಆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಡಿಲೀಟ್ ಮಾಡುವ ಕೆಲಸ ನಡೆದಿರಬಹುದು. ಆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

‘ಹರ್ ಘರ್ ತಿರಂಗ ಕಾರ್ಯಕ್ರಮವು ಬಿಜೆಪಿಯವರ ನಾಟಕದ ಉಪಕ್ರಮ. ಬಿಜೆಪಿಯವರು ರಾಷ್ಟ್ರ ಬಾವುಟಕ್ಕೆ  ಗೌರವ ಕೊಟ್ಟವರಲ್ಲ. ಅವರು ರಾಷ್ಟ್ರಗೀತೆ, ಬಾವುಟವನ್ನು ವಿರೋಧಿಸುತ್ತಿದ್ದವರು. ಅವರಿಗೆ ನಮ್ಮ ಬಾವುಟದ ಮೇಲೆ ನಂಬಿಕೆ ಇಲ್ಲ. ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ರಾಜಕೀಕರಣ ಮಾಡಲು ಆ ಪಕ್ಷದವರು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

ಕಾರ್ಕಳ: ದೇಶದ ಪಾಲಿಗೆ ಕಾಂಗ್ರೆಸ್ ಮುಳುವು : ಸುನಿಲ್‌ಕುಮಾರ್ – Vishwanews24

ಧ್ವಜಸಂಹಿತೆ ತಿದ್ದುಪಡಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಸಿದ್ದರಾಮಯ್ಯ,   ‘ರಾಷ್ಟ್ರಧ್ವಜವನ್ನು ಖಾದಿ ಅಥವಾ ರೇಷ್ಮೆಯಲ್ಲೇ ಮಾಡಬೇಕು. ಇವರು ಚೀನಾದಿಂದ ಆಮದು ಮಾಡಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚೀನಾದಿಂದ ಆಮದು ಹೆಚ್ಚಾಗಿದೆ. ಹಾಗಾದರೆ ಅತ್ಮನಿರ್ಭರ ಭಾರತ ಎನ್ನುವುದು ಎಲ್ಲಿ ಯಶಸ್ವಿಯಾಯಿತು?’ ಎಂದು ವ್ಯಂಗ್ಯವಾಗಿ ಕೇಳಿದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago