ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ
ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ? ಅದಕ್ಕೆ ಸಚಿವ ಸಂಪುಟ ಪುನಾರಚನೆ ವೇಳೆ ಕಡೇ ಕ್ಷಣದಲ್ಲಿ ಕೈ ಬಿಟ್ಟಿದ್ದಾರೆ ಎಂದು ಮಾಜಿ ಸಚಿವ ಮಂಕಾಳ ವೈದ್ಯ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಬೆಳಗ್ಗೆ 10 ಗಂಟೆಗೆ ಸ್ವತಃ ಸಿಎಂ ಕರೆ ಮಾಡಿ ಪ್ರಮಾಣವಚನಕ್ಕೆ ಬನ್ನಿ ಎಂದು ಹೇಳಿದರು. ಆದರೆ, 11 ಗಂಟೆಗೆ ಮತ್ತೆ ಕರೆ ಮಾಡಿ ನಿಮ್ಮ ಹೆಸರು ಕೈಬಿಟ್ಟಿದ್ದೇವೆ, ಮಲ್ಲಣ್ಣಗೆ ಅವಕಾಶ ಕೊಟ್ಟಿದ್ದೇವೆ ಎಂದರು. ಆ ನಡುವೆ ಏನೇನು ನಡೆಯಿತು ಎಂಬುದು ಗೊತ್ತಿಲ್ಲ. ಯಾರಿಗೆ ಅನ್ಯಾಯ, ಯಾವ ಭಾಗಕ್ಕೆ ಅನ್ಯಾಯವಾಯಿತು ಎಂಬುದನ್ನು ನಾವು ಹೇಳಿದರೂ ಅದು ಮಾತಲ್ಲೇ ಉಳಿಯುತ್ತದೆ ಎಂದರು.
ನನ್ನ ಅವಶ್ಯಕತೆ ಇರಲಿಲ್ಲವೇನೋ, ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಆದರೆ ಇಂತಹದೇ ಉದ್ದೇಶಕ್ಕೆ ಕೈಬಿಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಮಂತ್ರಿಯಾಗಿ ಮೂರು ವರ್ಷಗಳ ಕಾಲ ಒಳ್ಳೆಯ ಕೆಲಸ ಮಾಡಿದ್ದೇನೆ. ಯಾವುದೇ ಕೆಟ್ಟ ಹೆಸರು ತಂದುಕೊಂಡಿಲ್ಲ, ನನಗೆ ಅಷ್ಟು ಸಾಕು ಎಂದು ಹೇಳಿದರು.
ಸಂಪುಟ ಪುನಾರಚನೆ ವೇಳೆ ಕೊನೆ ಕ್ಷಣದಲ್ಲಿ ತಮ್ಮ ಹೆಸರು ಕೈಬಿಟ್ಟಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
