Featured

ನನ್ನ ಉದ್ದೇಶ ಕರ್ನಾಟಕ, ಕನ್ನಡಿಗರ ಅವಮಾನಿಸುವುದಲ್ಲ , ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆಯಿರಲಿ : ಫೋನ್ ಪೇ ಸಿಇಒ ಸಮೀರ್ ನಿಗಮ್ – vishwanews24

ನನ್ನ ಉದ್ದೇಶ ಕರ್ನಾಟಕ, ಕನ್ನಡಿಗರ ಅವಮಾನಿಸುವುದಲ್ಲ , ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆಯಿರಲಿ : ಫೋನ್ ಪೇ ಸಿಇಒ ಸಮೀರ್ ನಿಗಮ್

ನವದೆಹಲಿ : ಕೊನೆಗೂ ಫೋನ್ ಪೇ ಸಿಇಒ ಸಮೀರ್ ನಿಗಮ್ ಭೇಷರತ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದಾರೆ. “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಕರ್ನಾಟಕ ಸರ್ಕಾರ ಖಾಸಗಿ ಉದ್ಯೋಗ ಕೋಟಾ ಮಸೂದೆಯನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಿತ್ತು. ನಂತರ ಮತ್ತಷ್ಟು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಾತ್ಕಲಿಕವಾಗಿ ಸ್ಥಗಿತಗೊಳಿಸಿತ್ತು.

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದ ಸಮೀರ್ ನಿಗಮ್, ಭಾರತದಾತ್ಯಂತ 25,000ಕ್ಕೂ ಅಧಿಕ ಉದ್ಯೋಗಗಳನ್ನು ನಾನು ಸೃಷ್ಟಿಸಿದ್ದೇನೆ. ನನ್ನ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಯ ವಿರುದ್ಧ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ ಸಮೀರ್ ಕ್ಷಮೆಯಾಚಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

23 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

23 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

23 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

23 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

24 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

24 hours ago