ನನ್ನ ಐದು ವರ್ಷದ ಅವಧಿಯಲ್ಲಿ ನಡೆದ ಅಭಿವೃದ್ಧಿಯನ್ನು ಸಹಿಸಲಾಗದೆ ಅಪಪ್ರಚಾರ ನಡೆಸಿ ಜನರ ದಾರಿ ತಪ್ಪಿಸಿದ್ದಾರೆ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತನ್ನದು ಕೊನೆಯ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಇದೀಗ ಮತ್ತೆ ಸಿಎಂ ಆಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯದ ಜನತೆಯ ಹಾದಿ ತಪ್ಪಿಸುವ ಯತ್ನವನ್ನು ಇತರ ಪಕ್ಷಗಳು ನಡೆಸಿದವು. ನನ್ನ ಐದು ವರ್ಷದ ಅವಧಿಯಲ್ಲಿ ನಡೆದ ಅಭಿವೃದ್ಧಿಯನ್ನು ಸಹಿಸಲಾಗದೆ ಅಪಪ್ರಚಾರ ನಡೆಸಿ ಜನರ ದಾರಿ ತಪ್ಪಿಸಿದ್ದಾರೆ. ಸಿದ್ದರಾಮಯ್ಯ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದ್ದಾನೆ ಎಂದು ಅವರು ತಿಳಿದ್ದಾರೆ.

ಇನ್ನು ಮುಂದಿನ ಚುನಾವಣೆ ಸಂದರ್ಭ ಜನರು ಎಚ್ಚರಿಕೆಯಿಂದ ಮತದಾನ ಮಾಡಬೇಕು. ಯಾವುದೇ ಕಾರಣಕ್ಕೂ ಒಮ್ಮೆ ಮಾಡಿರುವ ತಪ್ಪು ಮತ್ತೆ ಮಾಡದಿರಿ ಎಂದಿದ್ದಾರೆ.