ಮಂಡ್ಯ: ನನ್ನ ಟೀಕೆ ಮಾಡುವವರಿಗೆ ಯೋಗ್ಯತೆ ಇದೆಯಾ ? ಕೆ.ಆರ್.ಪೇಟೆ ತಾಲೂಕಿನ 22 ಸಾವಿರ ರೈತ ಕುಟುಂಬದ ಸಾಲಮನ್ನಾ ಆಗಿದೆ. ಇತಿಹಾಸದಲ್ಲಿ ಯಾರೂ ನನ್ನ ಹಾಗೆ ಸಾಲಮನ್ನಾ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ನಿನ್ನೆ ವಿಧಿವಶರಾದ ಕೆ.ಆರ್. ಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ವೆಂಕಟ ಸುಬ್ಬೆಗೌಡರ ಅಂತಿಮ ದರ್ಶನ ಪಡೆದ ನಂತರ ಮಾತನಾಡಿದ ಅವರು, ಇತಿಹಾಸದಲ್ಲಿ ಯಾರು ಕೂಡಾ ನನ್ನ ಹಾಗೆ ಸಾಲಮನ್ನಾ ಮಾಡಿಲ್ಲ. ಸಿದ್ದರಾಮಯ್ಯ ಮಾಡಿದ ಸಾಲಮನ್ನಾ ಚೆನ್ನಾಗಿದೆಯಂತೆ, ನನ್ನದು ಸರಿ ಇಲ್ಲವಂತೆ. ನಾನು 14 ತಿಂಗಳು ಮಾಡಿದ ಕಾರ್ಯಕ್ರಮದ ಬಗ್ಗೆ ಪುಸ್ತಕ ಬಿಡುಗಡೆ ಮಾಡುತ್ತೇನೆ. ಮಂಡ್ಯ ಜನ ಸ್ವಾಭಿಮಾನ ಉಳಿಸಿದರು ಅಂತ ಸಿದ್ದರಾಮಯ್ಯ ಹೇಳುತ್ತಾರೆ. ಮಂಡ್ಯ ಜಿಲ್ಲೆಯ ರೈತರ ಕಬ್ಬು ಖರೀದಿ ಮಾಡುವವರು ಯಾರೂ ಇಲ್ಲ. ಅದರ ಬಗ್ಗೆ ಸಿದ್ದುಗೆ ಚಿಂತೆ ಇಲ್ಲ ಎಂದು ಟೀಕಿಸಿದರು.
ಮಂಡ್ಯ ಜಿಲ್ಲೆಯ ರೈತರ ಬಗ್ಗೆ ಕಾಳಜಿ ಇದ್ದರೆ, ಕಟಾವಿಗೆ ಬಂದಿರುವ ಕಬ್ಬು ಮಾರಾಟ ಮಾಡಿಸಿ. ಸಿದ್ದರಾಮಯ್ಯಗೆ ನಾನೇನು ವಿಶ್ವಾಸ ದ್ರೋಹ ಮಾಡಿಲ್ಲ. ಅದನ್ನು ಜನ ತೀರ್ಮಾನ ಮಾಡುತ್ತಾರೆ” ಎಂದು ಸಿದ್ದರಾಮಯ್ಯಗೆ, ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…